ಹುಬ್ಬಳ್ಳಿ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ

Promotion

ಹುಬ್ಬಳ್ಳಿ,ಏಪ್ರಿಲ್,11,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೆ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು ಇಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹುಬ್ಬಳ್ಳಿಯ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದರು.

ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ ಹೆಚ್.ಡಿ ಕುಮಾರಸ್ವಾಮಿ ಸಿದ್ಧಾರೂಢ ಅಜ್ಜನ ಆಶೀರ್ವಾದ ಪಡೆದರು. ಬಳಿಕ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಕಳೆದ ಮೂರ್ನಾಲ್ಕು ತಿಂಗಳಿನಿಂದ ನಾನು ಪ್ರಚಾರ ಮಾಡುತ್ತಿದ್ದೇನೆ. ಕೆಲವು ಸಣ್ಣಪುಟ್ಟ ಸಮಸ್ಯೆ ಬಗೆಹರಿಸಿ ಪಟ್ಟಿ ಬಿಡುಗಡೆ ಮಾಡುತ್ತೇವೆ. ಕರಡಿ ಸಂಗಣ್ಣ ಜೆಡಿಎಸ್ ಸೇರ್ಪಡೆ ಬಗ್ಗೆ ಚರ್ಚೆಯಾಗಿಲ್ಲ. ಸ್ವತಂತ್ರ ಸರ್ಕಾರ ತರಲು  ನಾನು ಹೋರಾಟ ಮಾಡುತ್ತಿದ್ದೇನೆ ಎಂದರು.

ಹಾಸನ ಟಿಕೆಟ್ ವಿಚಾರ ಕುರಿತು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಒಂದುವರೆ ವರ್ಷದ ಹಿಂದೆ ಹಾಸನ ಶಾಸಕರು ಸವಾಲು ಹಾಕಿದ್ದಾರೆ. ಹಾಗಾಗಿ ಸಾಮಾನ್ಯ ಕಾರ್ಯಕರ್ತನನ್ನ ನಿಲ್ಲಿಸಿ ಗೆಲ್ಲಿಸುತ್ತೇನೆ ಎಂದಿದ್ದೇನೆ. ಕಾರ್ಯಕರ್ತರ ಅಭಿಪ್ರಾಯ ಪಡೆದು ಟಿಕೆಟ್ ಫೈನಲ್ ಮಾಡುತ್ತೇನೆ ಎಂದು ಹೆಚ್.ಡಿಕೆ ಹೇಳಿದರು.

Key words:  Former CM- HD Kumaraswamy -visited -Hubballi -Siddharudh Math- blessings