ಕನ್ನಡ, ಕರ್ನಾಟಕಕ್ಕೆ ಅಪಚಾರ ಮಾಡಲು ಪಟ್ಟಭದ್ರ ಹಿತಾಸಕ್ತಿ ಕೆಲಸ: ಮಾಜಿ ಸಿಎಂ ಎಚ್ಡಿಕೆ ಆಕ್ರೋಶ

ಬೆಂಗಳೂರು, ಜೂನ್ 06, 2021 (www.justkannada.in): ಕನ್ನಡ, ಕರ್ನಾಟಕಕ್ಕೆ ಅಪಚಾರ ಮಾಡಲು ಪಟ್ಟಭದ್ರ ಹಿತಾಸಕ್ತಿ ಕೆಲಸ ಮಾಡುತ್ತಿರುವ ಅನುಮಾನ ಮೂಡುತ್ತಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ದೂರಿದ್ದಾರೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜನಸಮುದಾಯವೊಂದರ ಭಾವನೆಗಳ ಜೊತೆಗೆ ಆಟವಾಡುತ್ತಿರುವವರನ್ನು ಪತ್ತೆ ಹಚ್ಚುವ ಸಂದರ್ಭ ಈಗ ಸೃಷ್ಟಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಒಳ ಉಡುಪುಗಳ ಮೇಲೆ ಕನ್ನಡ ಧ್ವಜ ಬಣ್ಣ ಮತ್ತು ರಾಜ್ಯ ಸರ್ಕಾರದ ಲಾಂಛನವನ್ನು ಮುದ್ರಿಸಿದ ಅಮೆಜಾನ್ ನ ನಡೆಗೆ ಟ್ವಿಟರ್ ನಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡದ ಧ್ವಜವನ್ನು ಅಪಮಾನಿಸಿದ ಕೆನಡಾದ ಅಮೆಜಾನ್ ಗೆ ಕನ್ನಡಿಗರು ಬಿಸಿ ಮುಟ್ಟಿಸಿದ್ದಾರೆ. ಕನ್ನಡ, ಕರ್ನಾಟಕದ ವಿಚಾರದಲ್ಲಿ ಇತ್ತೀಚೆಗೆ ಬಹುರಾಷ್ಟ್ರೀಯ ಕಂಪನಿಗಳು ಅತ್ಯಂತ ಅಜಾಗರೂಕವಾಗಿ, ಅಸೂಕ್ಷ್ಮವಾಗಿ ವರ್ತಿಸುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.