ಸಿದ್ಧರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ- ಗೃಹ ಸಚಿವ ಅರಗ ಜ್ಞಾನೇಂದ್ರ.

Promotion

ಬೆಂಗಳೂರು,ಮೇ,30,2022(www.justkannada.in):  ಆರ್ ಎಸ್ ಎಸ್ ಮೂಲದ ಬಗ್ಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ ಗೃಹ ಸಚಿವ ಅರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಅರಗ ಜ್ಞಾನೇಂದ್ರ, ಈಗ ದೇಶದ ಪ್ರಧಾನಿ, ರಾಷ್ಟ್ರಪತಿ ಉಪರಾಷ್ಟ್ರಪತಿಗಳು ಆರ್ ಎಸ್ ಎಸ್ ನವರು. ಅನೇಕ ರಾಜ್ಯಗಳ ಸಿಎಂಗಳು ನಾನು  ಆರ್ ಎಸ್ ಎಸ್ ನಿಂದ ಬಂದವರು. ಆರ್ ಎಸ್ ಎಸ್ ವಿರುದ್ಧ ಮಾತನಾಡಿದರೇ ಅಲ್ಪಸಂಖ್ಯಾತರ ಮತ ಗಳಿಸಬಹುದೆಂಬ  ಲೆಕ್ಕಾಚಾರದಲ್ಲಿ ಕಾಂಗ್ರೆಸ್ ನವರು ಇರುತ್ತಾರೆ.

ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಗೆ ಬೇರೆ ವಿಚಾರಗಳೇ ಇಲ್ಲ. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ ಎಂದು ನುಡಿದರು.

Key words: former CM-Siddaramaiah-cannot -become –cm- again- Home Minister-Araga Jnanendra.