ಸಿಎಂ ಬದಲಾವಣೆ ಬಗ್ಗೆ ಸಿದ್ಧರಾಮಯ್ಯ ಹೇಳಿಕೆ ವಿಚಾರ:  ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು ಹೀಗೆ…

Promotion

ಬೆಂಗಳೂರು,ನವೆಂಬರ್,4,2020(www.justkannada.in): ಉಪಚುನಾವಣೆ ಬಳಿಕ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುತ್ತಾರೆ ಎಂದು ಹೇಳಿಕೆ ನೀಡಿರುವ ಸಿದ್ಧರಾಮಯ್ಯ ವಿರುದ್ಧ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.jk-logo-justkannada-logo

ಸಿಎಂ ಬದಲಾವಣೆ ಬಗ್ಗೆ ಸಿದ್ಧರಾಮಯ್ಯ ಪದೇ ಪದೇ ಮಾತನಾಡುತ್ತಿದ್ದಾರೆ. ಉಪಚುನಾವಣೆಯಲ್ಲಿ  ಎರಡು ಕ್ಷೇತ್ರದಲ್ಲಿ ಸೋಲುತ್ತೀರಿ. ಉಪಚುನಾವಣಾ ಫಲಿತಾಂಶದ ಬಳಿಕ ಯಾರ ಬಂಡವಾಳ ಏನು ಎಂದು ಗೊತ್ತಾಗುತ್ತದೆ ಎಂದು ಬಿಎಸ್ ಯಡಿಯೂರಪ್ಪ ಟಾಂಗ್ ನೀಡಿದರು.former-cm-siddaramaiah-cm-change-statement-cm-bs-yeddyurappa

ಈ ಬಗ್ಗೆ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಬಿಎಸ್ ಯಡಿಯೂರಪ್ಪ, ಸಿದ್ಧರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಬಾರದು ಎಂದು ಇದ್ದೆ ಆದರೆ ಅವರದ್ದು ಅತಿಯಾಗಿದೆ. ಪದೇ ಪದೇ ಬೇಜವಾಬ್ದಾರಿಯಿಂದ ಹೇಳಿಕೆ ನೀಡುತ್ತಿದ್ದಾರೆ. ಹೀಗಾಗಿ ಪ್ರತಿಕ್ರಿಯಿಸುತ್ತಿದ್ದೇನೆ. ಉಪಚುನಾವಣಾ ಫಲಿತಾಂಶದ ಬಳಿಕ ಯಾರ ಬಂಡವಾಳ ಏನು ಎಂದು ಗೊತ್ತಾಗುತ್ತದೆ ಎಂದು ಬಿಎಸ್ ಯಡಿಯೂರಪ್ಪ ತಿಳಿಸಿದರು.

Key words: former cm- siddaramaiah-cm –change-statement-CM- BS yeddyurappa