ಪ್ರಚಾರಕ್ಕೆ ತೆರಳಲು ಕಾರು ಹತ್ತುವಾಗ ಕುಸಿದ ಮಾಜಿ ಸಿಎಂ ಸಿದ್ಧರಾಮಯ್ಯ.

Promotion

ವಿಜಯನಗರ,ಏಪ್ರಿಲ್,29,2023(www.justkannada.in):  ಪ್ರಚಾರಕ್ಕೆ ತೆರಳು ಕಾರು ಹತ್ತುವಾಗ ಬಾಗಿಲ ಬಳಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕುಸಿದಿರುವ ಘಟನೆ ವಿಜಯಪುರ ಜಿಲ್ಲೆಯ ಕೂಡ್ಲಗಿ ಹೆಲಿಪ್ಯಾಡ್ ಬಳಿ ನಡೆದಿದೆ.

ಕೂಡ್ಲಗಿ ಕಾಂಗ್ರೆಸ್ ಅಭ್ಯರ್ಥಿ ಡಾ. ಎನ್ ಟಿ ಶ್ರೀನಿವಾಸ್ ಅವರ ಪರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಚಾರಕ್ಕೆಂದು ಹೆಲಿಕಾಪ್ಟರ್​ ಮೂಲಕ ಕೂಡ್ಲಗಿಗೆ ಆಗಮಿಸಿದ್ದರು.  ಹೆಲಿಕ್ಯಾಪ್ಟರನಿಂದ ಇಳಿದು  ಮೊಬೈಲ್​ನಲ್ಲಿ ಬ್ಯೂಸಿ ಆದ ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಅವರು ಕಾರಿನ ಬಳಿ  ಆಗಮಿಸಿ ಕಾರು ಹತ್ತಲು ಮುಂದಾದರು.

ಈ ವೇಳೆ  ಕಾರಿನ ಬಾಗಿಲ ಬಳಿಯೇ ಸಿದ್ದರಾಮಯ್ಯ ಕುಸಿದು ಬಿದ್ದಿದ್ದಾರೆ. ತಕ್ಷಣವೆ ಸ್ಥಳದಲ್ಲಿದ್ದ ವೈದ್ಯರು ಕೈ ಹಿಡಿದು ಎತ್ತಿದ್ದಾರೆ. ನಂತರ ಕಾರಿನ ಸೀಟಿನ ಮೇಲೆ ಕೂಡಿಸಿ ಗುಕ್ಲೋಸ್ ನೀಡಿದ್ದಾರೆ. ಗುಕ್ಲೋಸ್ ಕುಡಿದ ಬಳಿಕ ಚೇತರಿಸಿಕೊಂಡು ಮತ್ತೆ ಸಿದ್ದರಾಮಯ್ಯ ಜನರತ್ತ ಕೈ ಬೀಸಿದ್ದಾರೆ.

Key words: Former CM -Siddaramaiah -collapsed – car – campaign.