ಮಾಜಿ ಸಿಎಂ ಸಿದ್ಧರಾಮಯ್ಯ ಭ್ರಷ್ಟಾಚಾರ ಆರೋಪ: ಸ್ಪಷ್ಟನೆ ನೀಡಿದ ಆರೋಗ್ಯ ಸಚಿವ ಶ್ರೀರಾಮುಲು….

Promotion

ಬೆಂಗಳೂರು,ಜು, 23,2020(www.justkannada.in):   ಕೊರೋನಾ ಕಿಟ್ ಖರೀದಿಯಲ್ಲಿ 2 ಸಾವಿರ ಕೋಟಿ ಅವ್ಯವಹಾರವಾಗಿದೆ. ರಾಜ್ಯ ಸರ್ಕಾರ 2 ಸಾವಿರ ಕೋಟಿ ಲೂಟಿ ಮಾಡಿದೆ ಎಂದು ಆರೋಪಿಸಿರುವ ಮಾಜಿ ಸಿಎಂ ಸಿದ್ಧರಾಮಯ್ಯಗೆ ಆರೋಗ್ಯ ಸಚಿವ ಶ್ರೀರಾಮುಲು ತಿರುಗೇಟು ನೀಡಿದ್ದಾರೆ.jk-logo-justkannada-logo

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು, ಆರೋಗ್ಯ ಇಲಾಖೆಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಒಂದೇ ಒಂದು ರೂಪಾಯಿ ಅಕ್ರಮ ನಡೆದಿಲ್ಲ. ಕೊರೋನಾಗೆ ಆರೋಗ್ಯ ಇಲಾಖೆಯಲ್ಲಿ 290 ಕೋಟಿ ವೆಚ್ಚವಾಗಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರದ ವಿರುದ್ದ 2 ಸಾವಿರ ಕೋಟಿ ಭ್ರಷ್ಟಾಚಾರ ಆರೋಪ ಮಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಇತ್ತೀಚೆಗೆ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಶ್ರೀರಾಮುಲು ಆರೋಪ ಸಾಬೀತಾದರೇ ರಾಜೀನಾಮೆ ನೀಡುವುದಾಗಿ ಹೇಳಿದ್ದರು.

Key words: Former CM –Siddaramaiah- corruption-Health Minister -Sriramulu