ಮತ್ತೆ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ.

Promotion

ಬಾಗಲಕೋಟೆ ,ಸೆಪ್ಟಂಬರ್,27,2021(www.justkannada.in):  ಮಾಜಿ ಸಿಎಂ ಸಿದ್ಧರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗುವ ಆಸೆಯನ್ನ ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ.

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಜಕನೂರು ಸಿದ್ಧುಶ್ರೀ ಉತ್ಸವದಲ್ಲಿ ಮಾತನಾಡಿದ ಜಕನೂರು ಮಾಧವಲಿಂಗಶ್ರೀ ಅವರು, ಸಿದ್ಧರಾಮಯ್ಯ ಮತ್ತೆ ಸಿಎಂ ಆಗಲಿ. ಮತ್ತೆ ರಾಜ್ಯವನ್ನ ಮುನ್ನೆಡೆಸಲಿ ಎಂದು ಆಶೀರ್ವಾದ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ, ಮುಂದಿನ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಂತೆ ಶ್ರೀಗಳು ಆಶೀರ್ವಾದ ಮಾಡಿದ್ದಾರೆ. ಶ್ರೀಗಳ ಆಶೀರ್ವಾದದಿಂದ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ನಾನು ಮತ್ತಷ್ಟು ಅಭಿವೃದ್ಧಿ ಕೆಲಸಗಳನ್ನ ಮಾಡುತ್ತೇನೆ ಎಂದು ನುಡಿಯುವ ಮೂಲಕ ಪರೋಕ್ಷವಾಗಿ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದರು.

Key words: Former CM- Siddaramaiah –expressed- his desire – become- CM –again- indirectly.