ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮೈಸೂರಿನ ನಿವಾಸ ಸೀಲ್ ಡೌನ್ ಮಾಡಿ ಔಷಧಿ ಸಿಂಪಡಣೆ…

Promotion

ಮೈಸೂರು,ಆ,4,2020(www.justkannada.in):  ಮಾಜಿ ಸಿ ಎಂ ಸಿದ್ದರಾಮಯ್ಯ ಗೆ ಕೊರೋನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆ ಮೈಸೂರಿನ ಸಿದ್ದರಾಮಯ್ಯ ಅವರ ನಿವಾಸವನ್ನ ಸೀಲ್ ಡೌನ್ ಮಾಡಲಾಗಿದೆ.jk-logo-justkannada-logo

ನಗರದ ಟಿ ಕೆ ಲೇಔಟ್ ನಲ್ಲಿರುವ  ಮಾಜಿ ಸಿಎಂ ಸಿದ್ಧರಾಮಯ್ಯ ನಿವಾಸಕ್ಕೆ  ಮೈಸೂರು ಮಹಾನಗರ ಪಾಲಿಕೆ ಸಿಬ್ಬಂದಿ  ಔಷಧಿ ಸಿಂಪಡಿಸಿ ಸೀಲ್ ಡೌನ್ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಮೂರ್ನಾಲ್ಕು ದಿನ ಇಲ್ಲೆ ವಾಸ್ತವ್ಯ ಹೂಡಿದ್ದರು. ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ಸಂಪರ್ಕದಲ್ಲಿದವರನ್ನ ಕ್ವಾರಂಟೈನ್ ಮಾಡಲಾಗಿದೆ.Former CM Siddaramaiah- Mysore- residence-seal down

ರಾಕೇಶ್ ಸಿದ್ದರಾಮಯ್ಯ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕುಟುಂಬಸ್ಥರಿಗೂ ಕೊರೋನಾ ಸೋಂಕಿನ ಆತಂಕ ಎದುರಾಗಿದೆ. ಸದ್ಯ ಎಲ್ಲರೂ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ಇನ್ನು ಕೊರೋನಾ ದೃಢಪಟ್ಟ ಹಿನ್ನೆಲೆ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಆತಂಕ ಹೆಚ್ಚಾಗಿದೆ.

Key words: Former CM Siddaramaiah- Mysore- residence-seal down