ನ.17ರಿಂದ ಕಾಲೇಜುಗಳ ಆರಂಭ ನಿರ್ಧಾರಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಆಕ್ಷೇಪ: ಸರ್ಕಾರದ ವಿರುದ್ಧ ಕಿಡಿ….

Promotion

ತುಮಕೂರು,ಅಕ್ಟೋಬರ್,23,2020(www.justkannada.in):  ನವೆಂಬರ್ 17ರಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಆರಂಭಿಸಲು ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ.jk-logo-justkannada-logo

ಈ ಕುರಿತು ತುಮಕೂರಿನ ಶಿರಾದಲ್ಲಿ ಮಾತನಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ಯಾವುದೇ ಕಾರಣಕ್ಕೂ ಕಾಲೇಜು ಓಪನ್ ಬೇಡ. ಒಂದು ವರ್ಷ ಶಾಲೆ ಮುಂದಕ್ಕೆ ಹಾಕಿ. ಒಂದು ವರ್ಷ ಎಲ್ಲರನ್ನೂ ಪಾಸ್ ಮಾಡಿ. ಪಾಸ್ ಮಾಡಿದ್ರೆ ಜಗತ್ತು ಪ್ರಳಯ ಆಗೋದಿಲ್ಲ ಎಂದು ಸಲಹೆ ನೀಡಿದ್ದಾರೆ.former-cm-siddaramaiah-objected-starting-colleges-against-government

ಕಾಲೇಜುಗಳ ಆರಂಭ ಇದು ಮೂರ್ಖತನದ ನಿರ್ಧಾರ. ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ. ಜೀವದ ಜತೆ ಚೆಲ್ಲಾಟ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಕಾಲೇಜುಗಳನ್ನು ಪ್ರಾರಂಭಿಸುವುದು ಬೇಡ. ಸಿಎಂ ಬಿಎಸ್ ವೈ, ಸಚಿವರಾದ ಸುರೇಶ್ ಕುಮಾರ್, ಅಶ್ವಥ್ ನಾರಾಯಣ್ ಜತೆ ಈ ಬಗ್ಗೆ ಮಾತನಾಡುತ್ತೇನೆ ಎಂದು ಸಿದ್ಧರಾಮಯ್ಯ ತಿಳಿಸಿದ್ದಾರೆ.

Key words: Former CM -Siddaramaiah -objected – starting- colleges-against- government