ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಹೇಳಿಕೆಗೆ ಗರಂ: ‘ಹಳ್ಳಿಹಕ್ಕಿ’ ವಿರುದ್ದ ಟ್ವಿಟ್ಟರ್ ನಲ್ಲಿ ಗುಡುಗಿದ ಮಾಜಿ ಸಿಎಂ ಸಿದ್ದರಾಮಯ್ಯ…

Promotion

ಬೆಂಗಳೂರು,ಮೇ,13,2019(www.justkannada.in): ರಾಜ್ಯದ ದೋಸ್ತಿ ಪಕ್ಷಗಳ ನಾಯಕರ ನಡುವಿನ ವಾಕ್ಸಮರ ಮುಂದುವರೆದಿದ್ದು ಸಿದ್ದರಾಮಯ್ಯ ಮತ್ತೆ ಸಿಎಂ ಎಂಬ ಹೇಳಿಕೆ ವಿಚಾರ ಕುರಿತು ಅಸಮಾಧಾನ ಹೊರ ಹಾಕಿದ್ದ  ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್  ವಿರುದ್ದ ಇದೀಗ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಕುಟುಕಿದ್ದಾರೆ.

ಟ್ವಿಟ್ಟರ್ ನಲ್ಲಿ ಟ್ವಿಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರದಲ್ಲಿ ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿ ಹಾಕಿದೆ. ಇದರಿಂದಾಗಿ ಹೆಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ವಿವರವಾಗಿ ಪ್ರತಿಕ್ರಿಯಿಸಲಾರೇ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಗೆ ಕುಖ್ಯಾತರು. ಅವರಿಗೆ ದೇವರು ಒಳ್ಳೆಯ ಬುದ್ದಿಕೊಡಲಿ ಎಂದು ಟ್ವಿಟ್ಟರ್ ನಲ್ಲೇ ವಾಗ್ದಾಳಿ ನಡೆಸಿದ್ದಾರೆ.

ಹಾಗೆಯೇ ಮುಂದುವರೆದು ಜೆಡಿಎಸ್ ಅಧ್ಯಕ್ಷ ಹೆಚ್.ವಿಶ್ವನಾಥ್ ಹೇಳಿಕೆಯನ್ನ ಸಮನ್ವಯ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸುತ್ತೇನೆ. ಮೊದಲು ಜಿ.ಟಿ ದೇವೇಗೌಡ. ಈಗ ಹೆಚ್, ವಿಶ್ವನಾಥ್, ಮುಂದೆ ಯಾರು ಗೊತ್ತಿಲ್ಲ. ನನ್ನನ್ನು ಗುರಿಯಾಗಿಸಿದ ಇಂತಹ ಹೇಳಿಕೆಗಳ ಬಗ್ಗೆ ಜೆಡಿಎಸ್ ವರಿಷ್ಟರು ಗಮನ ಹರಿಸುವುದು ಒಳಿತು ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ನಿನ್ನೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ಕುರಿತು ಅವರ ಬೆಂಬಲಿಗರು ಹೇಳಿಕೆ ನೀಡುವ ಕುರಿತು ಪ್ರತಿಕ್ರಿಯಿಸಿದ್ದ ಹೆಚ್.ವಿಶ್ವನಾಥ್,  ಸಿದ್ದರಾಮಯ್ಯ ಮುಖ್ಯಮಂತ್ರಿ ಆಗ್ಲಿ ಅಂತಾ ಕೆಲವರು ಚೆಮಚ್ಕಾಗಿರಿ ಮಾಡ್ತಿದ್ದಾರೆ. ಸಿದ್ದರಾಮಯ್ಯ 5 ವರ್ಷ ಆಡಳಿತ ಮಾಡಿದ್ರು ಏನ್ ಮಾಡಿದ್ರು..? ಎಂದು ಹೇಳಿಕೆ ನೀಡಿದ್ದರು.

Key words: Former CM Siddaramaiah-outrage- against-H.vishwanath-twitter