ಮೈಸೂರು ಗ್ಯಾಂಗ್ ರೇಪ್ ಬಗ್ಗೆ ಸದನದಲ್ಲಿ ಸಿದ್ಧರಾಮಯ್ಯ ಪ್ರಸ್ತಾಪ: ಸರ್ಕಾರಕ್ಕೆ ತರಾಟೆ.

ಬೆಂಗಳೂರು,ಸೆಪ್ಟಂಬರ್,22,2021(www.justkannada.in ಇತ್ತಿಚೆಗೆ ಮೈಸೂರಿನಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸದನದಲ್ಲಿ ಇಂದು ಪ್ರಸ್ತಾಪಿಸಿ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡರು.

ಮೈಸೂರು ಗ್ಯಾಂಗ್ ರೇಪ್ ಬಗ್ಗೆ ವಿಧಾನಸಭೆ ಕಲಾಪದಲ್ಲಿ  ಪ್ರಸ್ತಾಪಿಸಿ ಮಾತನಾಡಿದ ಸಿದ್ಧರಾಮಯ್ಯ, ಯುವತಿ ತನ್ನ ಸ್ನೇಹಿತನ ಜತೆ ವಾಯುವಿಹಾರಕ್ಕೆ ಅಲ್ಲಿಗೆ ಹೋಗಿದ್ದರು. ಆ ವೇಳೆ ಅತ್ಯಾಚಾರ ನಡೆದಿದೆ. ಮೈಸೂರು ಒಂದು ಸಾಂಸ್ಕೃತಿಕ ನಗರಿ. ಎಜುಕೇಷನ್ ಹಬ್ ಕೂಡ ಹೌದು. ಇಲ್ಲಿಗೆ ಸಾವಿರಾರು ಜನ ಪ್ರವಾಸಿಗರು ಬರುತ್ತಾರೆ.  ಇಂತಹ ನಗರದಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿದೆ.  ಇದು ಪ್ರವಾಸಿಗರ ಮೇಲೆ ಪರಿಣಾಮ ಬೀರುತ್ತೆ  ಈ ಘಟನೆಯಿಂದ ಜನ ಭಯಭೀತರಾಗಿದ್ದಾರೆ. ಪೋಷಕರು ಆತಂಕಕ್ಕೊಳಗಾಗಿದ್ದಾರೆ  ನಾನು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಿದ್ದೆ. ನಮ್ಮ ಕಾಂಗ್ರೆಸ್ ನಿಂದ  ಸತ್ಯಶೋಧನಾ ಸಮಿತಿ ರಚಿಸಿದ್ದವು. ಅವರು ಅಲ್ಲಿಗೆ ಹೋಗಿ  ಪರಿಶೀಲಿಸಿ ಕೆಲ ಪ್ರಶ್ನೆಗಳನ್ನ ಎತ್ತಿದ್ದಾರೆ ಎಂದರು.Don't-let-session-curtailed-Opposition-leader-Siddaramaiah

ಇಂ ತಹ ಘಟನೆಗಳನ್ನ ದೆಹಲಿಯ ನಿರ್ಭಯಾ ಕೇಸ್ ನಂತೆ ಗಂಭೀರವಾಗಿ ಪರಿಗಣಿಸಬೇಕು. ಇಂತಹ  ಗಂಭೀರ ಪ್ರಕರಣದಲ್ಲೂ.ಕೇಸ್ ದಾಖಲಿಸಲು ಪೊಲೀಸರು ಏಕೆ ತಡ ಮಾಡಿದರು..? ಘಟನೆ ನಡೆದ  14 ರಿಂಧ 15 ಗಂಟಗಳ ಬಳಿಕ ಎಫ್ ಐಆರ್ ದಾಖಲಾಗಿದೆ. ಪೊಲೀಸರು ಅನಗತ್ಯವಾಗಿ ತಡ ಮಾಡಿದ್ದು ಏಕೆ.  ಹಾಗೆಯೆ ಯುವತಿಯ ಹೇಳಿಕೆಯನ್ನ ಕೂಡ ದಾಖಲಿಸಲಿಲ್ಲ ಎಂದು ಸರ್ಕಾರವನನ್ನ ತರಾಟೆಗೆ ತೆಗೆದುಕೊಂಡರು.

ಅಲ್ಲದೆ ಸಂತ್ರಸ್ತ ಯುವತಿ, ಮತ್ತು ಯುವಕನ ಮುಂದೆ ಆರೋಪಿಗಳ ಪರೇಡ್ ನಡೆಸಿಲ್ಲ. ಆರೋಪಿಗಳನ್ನ ಗುರುತಿಸುವ ಕೆಲಸ ಆಗಿಲ್ಲ ಎಂದು ಸಿದ್ಧರಾಮಯ್ಯ ಕಿಡಿಕಾರಿದರು.

Key words: former CM-Siddaramaiah- session- Mysore- gang rape

ENGLISH SUMMARY…

Siddaramaiah raises Mysuru gang rape issue in Assembly: Lambasts govt.
Bengaluru, September 22, 2021 (www.justkannada.in): Leader of the opposition in the assembly Siddaramaiah today raised the gang rape issue that took place in Mysuru recently and lambasted the government.
“The girl had gone there with one of her friends for a walk when the incident has taken place. Mysuru is a cultural city. Moreover, it is also a major educational hub. Thousands of tourists come to Mysuru daily. The rape incident has taken place in such a place. What type of message will it send to society, and what effect will it make on the people. The public is scared after the incident, and the parents are even more so. I also visited the spot and inspected it. The congress party had formed a fact-finding committee, which visited the spot and has raised a few questions,” he informed.
He urged the State Government to consider the case as that of the Nirbhaya case in New Delhi. “Why did the police delay in registering a case in such a serious issue? The FIR is registered 14 or 15 hours after the incident took place. Why did they delay? Why was the girls’ statement not recorded?” he questioned the government.
He also alleged that the culprits were not paraded in front of the victim and her friend, and no efforts have been made to identify them.
Keywords: Siddaramaiah/ Mysuru gang rape case/ lambasts/ State Government