ನಾಳೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಿಎಂ ಸಿದ್ಧರಾಮಯ್ಯಗೆ ಸಮನ್ಸ್.

Promotion

ಬೆಂಗಳೂರು,ಮೇ,23,2022(www.justkannada.in):  ಮೇಕೆದಾಟು ಪಾದಯಾತ್ರೆ ವೇಳೆ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ   ನಾಳೆ ವಿಚಾರಣೆಗೆ ಹಾಜರಾಗುವಂತೆ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್ ನೀಡಿದೆ.

ಕೊರೋನಾ ನಿಯಮಗಳನ್ನ ಉಲ್ಲಂಘನೆ  ನಡೆಸಿ ಪಾದಯಾತ್ರೆ ನಡೆಸಿದ ಆರೋಪದ ಮೇಲೆ ಮಾಜಿ ಸಿಎಂ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕರಣ ಸಂಬಂಧದ ವಿಚಾರಣೆ  ನಡೆಸಿದ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಮಾಜಿ ಸಿಎಂ ಸಿದ್ಧರಾಮಯ್ಯಗೆ ನಾಳೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ಈ ಮೂಲಕ ಕೊರೋನಾ  ನಿಯಮ  ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ನಡೆಸಿದ ಕಾಂಗ್ರೆಸ್ ಗೆ ಶಾಕ್ ನೀಡಿದೆ.

Key words: Former CM-Siddaramaiah-summons-attend-tomorrow-hearing.