ಹಿಂದಿ ದಿವಸ್ ವಿರೋಧಿಸಿ ಮಾಜಿ ಸಿಎಂ ಸಿದ್ಧರಾಮಯ್ಯ ಟ್ವೀಟ್.

Promotion

ಬೆಂಗಳೂರು,ಸೆಪ್ಟಂಬರ್,14,2022(www.justkannada.in):  ಕೇಂದ್ರ ಸರ್ಕಾರ ಆಚರಿಸುತ್ತಿರುವ ಹಿಂದಿ ದಿವಸ್ ವಿರೋಧಿಸಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಟ್ವಿಟ್ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ಯಾವ ಭಾಷೆಯ ಕಲಿಕೆಯನ್ನೂ ವಿರೋಧಿಸುವುದಿಲ್ಲ, ಯಾವ ಭಾಷೆಯ ಹೇರಿಕೆಯನ್ನೂ ಸಹಿಸುವುದಿಲ್ಲ. ಕನ್ನಡ‌ ನಾಡಿನಲ್ಲಿ ಕನ್ನಡಕ್ಕೆ ಮೊದಲ ಪೂಜೆ.

ಕೇಂದ್ರದ ಬಿಜೆಪಿ ಸರ್ಕಾರ ಹಿಂದಿ ದಿವಸ್ ಆಚರಿಸಿ ಹಿಂದಿ ಭಾಷೆಯ ಹೆಸರಲ್ಲಿ ಆರ್ ಎಸ್ ಎಸ್ ಪ್ರಣೀತ ಹಿಂದುತ್ವ ಹೇರುವುದನ್ನು ನಾನು ಖಂಡಿಸುತ್ತೇನೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

Key words: Former CM –Siddaramaiah- tweeted- against -Hindi Divas.