ಸುಳ್ಳು ಆರೋಪಗಳ ವಿಷ ಕುಡಿದು,ಕುಡಿದು ನಾನು ವಿಷಕಂಠನಾಗಿದ್ದೇನೆ- ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟ್

Promotion

ಬೆಂಗಳೂರು,ಜು,25,2019(www.justkannada.in): ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಕೂಡಾ ನನ್ನ ಮೇಲೆ ಸುಳ್ಳು ಆರೋಪಗಳ ಸುರಿಮಳೆ ಆಗಿವೆ. ಸುಳ್ಳು ಆರೋಪಗಳ ವಿಷ ಕುಡಿದು ಕುಡಿದು ನಾನು ವಿಷಕಂಠನಾಗಿದ್ದೇನೆ ಎಂದು ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಟ್ವಿಟ್ ಮಾಡಿರುವ ಸಿದ್ದರಾಮಯ್ಯ  ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಕೂಡ ನಮ್ಮ ಮೇಲೆ ಸುಳ್ಳು ಆರೋಪಗಳ ಸುರಿಮಳೆಯಾಗಿದೆ.  ನನ್ನ ರಾಜಕೀಯ ಜೀವನದಲ್ಲಿ ಇವೆಲ್ಲಾ ಮೊದಲನೆಯದಲ್ಲಾ. ಕೊನೆಯದ್ದೂ ಅಲ್ಲ. ಇಂತಹ ಸುಳ್ಳು ಆರೋಪಗಳ ವಿಷ ಕುಡಿದು ಕುಡಿದು ನಾನು ವಿಷಕಂಠನಾಗಿದ್ದೇನೆ.ಕೊನೆಗೆ ಸತ್ಯವೇ ಗೆಲ್ಲವುದು, ಸತ್ಯಮೇವ ಜಯತೆ..ಎಂದು ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

ಇನ್ನೊಂದು ಟ್ವಿಟ್ ನಲ್ಲಿ, ‘ಸಿದ್ದರಾಮಯ್ಯನವರು ನಮ್ಮ ನಾಯಕರು ಎಂದು ಅತೃಪ್ತ ಶಾಸಕರು ಹೇಳಿಕೆ ನೀಡಿದ್ದರೇ ಅವರಿಗೆ ತಮ್ಮ ತಪ್ಪುಗಳನ್ನ ಮುಚ್ಚಿಕೊಳ್ಳುವ ದುರುದ್ದೇಶವಿರಬಹುದು. ಅವರು ನೀಡದೆ ಇದ್ದ ಹೇಳಿಕೆಯನ್ನ ಮಾಧ್ಯಮಗಳು ವರದಿ ಮಾಡುತ್ತಿದ್ದರೇ ಇದರ ಹಿಂದೆ ಯಾರೋ ಸಂಚುಕೋರರು ಇದ್ದಾರೆ ಎಂದರ್ಥ. ಸತ್ಯ ಬಯಲಾಗುವ ಕಾಲ ಬಂದೇ ಬರುತ್ತದೆ ಎಂದು ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Key words: Former CM -Siddaramaiah –Twitter-False accusation