ಇಂದಿನಿಂದ ಮೂರು ದಿನಗಳ ಕಾಲ ಮಾಜಿ ಸಿಎಂ ಸಿದ್ಧರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ.

Promotion

ಮೈಸೂರು,ಸೆಪ್ಟಂಬರ್,5,2022(www.justkannada.in):   ವಿಪಕ್ಷ ನಾಯಕ ಸಿದ್ಧರಾಮಯ್ಯ ಇಂದಿನಿಂದ ಮೂರು ದಿನಗಳ ಕಾಲ ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಸಂಜೆ ಮಾಜಿ ಸಿಎಂ ಸಿದ್ಧರಾಮಯ್ಯ ಖಾಸಗಿ ಹೋಟೆಲ್ ನಲ್ಲಿ  ಭಾರತ್ ಜೋಡೋ ಯಾತ್ರೆ ಕುರಿತು ಪೂರ್ವಭಾವಿ ಸಭೆ ನಡೆಸಲಿದ್ದಾರೆ.  ಮೈಸೂರು, ಚಾಮರಾಜನಗರ ಜಿಲ್ಲೆಗಳ ಕಾಂಗ್ರೆಸ್ ಶಾಸಕರು, ಮಾಜಿ ಶಾಸಕರ ಜೊತೆ ಚರ್ಚಿಸಲಿದ್ದಾರೆ.  ಮೈಸೂರು ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣಾ ತಂತ್ರ ರೂಪಿಸಲಿದ್ದಾರೆ ಎನ್ನಲಾಗಿದೆ.

ನಂತರ ನಾಳೆ ಸಹೋದರ ರಾಮೇಗೌಡ ಪುಣ್ಯ ತಿಥಿ ಕಾರ್ಯದಲ್ಲಿ ಸಿದ್ಧರಾಮಯ್ಯ ಭಾಗಿಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Former CM-Siddaramaiah – visit -Mysore – three days