ಶಾಸಕ ಜಮೀರ್ ಅಹ್ಮದ್ ಖಾನ್ ಮನೆಗೆ ಮಾಜಿ ಸಿಎಂ ಸಿದ್ಧರಾಮಯ್ಯ ಭೇಟಿ.

Promotion

ಬೆಂಗಳೂರು,ಆಗಸ್ಟ್,15,2021(www.justkannada.in):  ಶಾಸಕ ಜಮೀರ್  ಅಹ್ಮದ್ ಖಾನ್ ಅವರ ನಿವಾಸಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಭೇಟಿ ನೀಡಿದ್ದಾರೆ.

ಶಾಸಕ ಜಮೀರ್ ಅಹ್ಮದ್ ಖಾನ್ ಅವರ ನಿವಾಸ, ಕಚೇರಿಗಳ ಮೇಲೆ ಇಡಿ ದಾಳಿಯ ಬಳಿಕ ಜಮೀರ್ ಅವರ ಮೇಲೆ ಸಿದ್ದರಾಮಯ್ಯ ಮುನಿಸಿಕೊಂಡಿದ್ದರು ಎಂಬ ಸುದ್ದಿ ಹರಡಿತ್ತು. ಇದೀಗ ಈ ವಿಚಾರಕ್ಕೆ ತೆರೆ ಬಿದ್ದಿದೆ, ನಿನ್ನೆ ಸಂಜೆ ಮಾಜಿ ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿದ್ದಂತ ಶಾಸಕ ಜಮೀರ್ ಅಹ್ಮದ್ ಖಾನ್ ಅವರು, ತಮ್ಮ ಮನೆಗೆ ಭೇಟಿ ನೀಡುವಂತೆ ಆಹ್ವಾನಿಸಿದ್ದರು.

ಹೀಗಾಗಿ ಇಂದು ಜಮೀರ್ ಅಹ್ಮದ್ ಮನೆಗೆ ಮಾಜಿ ಸಿಎಂ ಸಿದ್ಧರಾಮಯ್ಯ ಭೇಟಿ ನೀಡಿದ್ದಾರೆ. ಜಮೀರ್ ಮನೆಗೆ ಭೇಟಿ ನೀಡಿರುವಂತ ಮಾಜಿ ಸಿಎಂ ಸಿದ್ಧರಾಮಯ್ಯ ಅವರು, ಅವರೊಂದಿಗೆ ಹಲವು ವಿಚಾರಗಳ ಕುರಿತಂತೆ ಚರ್ಚಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಇದೇ ವೇಳೆ ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ಸಹ ಜಮೀರ್ ಅಹ್ಮದ್ ಖಾನ್ ನಿವಾಸಕ್ಕೆ ಭೇಟಿ ನೀಡಿದ್ದಾರೆ.

Key words: Former CM -Siddaramaiah –visits-MLA- Zamir Ahmed Khan- home