ಮಳೆಹಾನಿ ಪ್ರದೇಶಗಳಿಗೆ ಮಾಜಿ ಸಿಎಂ ಸಿದ್ಧರಾಮಯ್ಯ ಭೇಟಿ, ಪರಿಶೀಲನೆ.

ಕೋಲಾರ,ನವೆಂಬರ್ 24,2021(www.justkannada.in): ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಇಂದು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿ ಮಳೆ ಹಾನಿ ಬಗ್ಗೆ ರೈತರಿಂದ ಮಾಹಿತಿ ಪಡೆದರು.

ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡ ಮಾಜಿ ಸಿಎಂ ಸಿದ್ಧರಾಮಯ್ಯ ರೈತರ ಜಮೀನಿಗೆ ಭೇಟಿ ನೀಡಿ ಮಳೆ ನಡೆಸಿ ರೈತರಿಂದ ಮಾಹಿತಿ ಪಡೆದರು. ಹೊಸಕೋಟೆ ವಿಧಾನಸಭಾ ಕ್ಷೇತ್ರದ ತಾವರೆಕೆರೆ ಗ್ರಾಮದಲ್ಲಿ ಮಳೆ ಹಾನಿ ಪೀಡಿತ ಪ್ರದೇಶಕ್ಕೆ  ಭೇಟಿ ನೀಡಿದ ವೇಳೆ ರೈತರು ತಮಗಾದ ನಷ್ಟದ ಬಗ್ಗೆ  ವಿವರಿಸಿದರು. ಹೂವಿನ ಬೆಳೆ ಸಂಪೂರ್ಣ ನಷ್ಟವಾಗಿದೆ ಎಂದು ರೈತರು ಅಳಲು ತೋಡಿಕೊಂಡರು.

ಈ ವೇಳೆ ಬೆಳೆ ಹಾನಿಯ ಬಗ್ಗೆ ಸರ್ಕಾರ ಸಮೀಕ್ಷೆ ನಡೆಸದೆ ಇರುವ ಬಗ್ಗೆ ಅಧಿಕಾರಿಗಳನ್ನು ಸಿದ್ಧರಾಮಯ್ಯ ತರಾಟೆಗೆ ತೆಗೆದುಕೊಂಡರು. ಬೆಳೆ ನಷ್ಟದ ಬಗ್ಗೆ ಅಧ್ಯಯನ ನಡೆಸಲಾಗಿದೆಯೇ ಎಂದು ಸಿದ್ದರಾಮಯ್ಯ ಅಧಿಕಾರಿಗಳನ್ನು ಪ್ರಶ್ನಿಸಿದರು. ಕೃಷಿ ಇಲಾಖೆ ಅಧಿಕಾರಿಗಳು ಸಮೀಕ್ಷೆ ನಡೆಸಿದ್ದಾರೆ ಎಂದು ಹಿರಿಯ ಅಧಿಕಾರಿ ಮಾಹಿತಿ ನೀಡಿದರು.

ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ  ರಾಜ್ಯದ ಹಲವು ಜಿಲ್ಲೆಗಳು ತತ್ತರಿಸಿದ್ದು ಅಪಾರ ಪ್ರಮಾಣದ ಬೆಳೆಹಾನಿ ಮತ್ತು ಮನೆಗಳು ಕುಸಿದಿವೆ. ಇದರಿಂದಾಗಿ ಜನ ಸಂಕಷ್ಟಕ್ಕೆ ಸಿಲುಕಿದ್ದು ಸರ್ಕಾರ ಪರಿಹಾರದ ಭರವಸೆ ನೀಡಿದೆ.

Key words: Former CM –Siddaramaiah- visits-rainy area-kolar-chikkaballapur