ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಕೊಲೆ ಪ್ರಕರಣ: 24 ಗಂಟೆಯೊಳಗೆ ಆರೋಪಿಗಳನ್ನ ಬಂಧಿಸುತ್ತೇವೆ- ಸಿಎಂ ಬಿಎಸ್ ವೈ.

Promotion

ಬೆಂಗಳೂರು,ಜೂನ್,24,2021(www.justkannada.in): ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  24 ಗಂಟೆಯೊಳಗೆ ಆರೋಪಿಗಳನ್ನ ಬಂಧಿಸುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.jk

ಬೆಂಗಳೂರಿನಲ್ಲಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಪ್ರಕರಣ ಸಂಬಂಧ ಪೊಲೀಸ್ ಕಮಿಷನರ್ ಕಮಲ್ ಪಂತ್  ಜತೆ ಚರ್ಚಿಸಿದ್ದೇನೆ.  ಕೂಡಲೇ ಕಟ್ಟುನಿಟ್ಟಿನ  ಕ್ರಮಕ್ಕೆ ಕಮಿಷನರ್ ಗೆ ಸೂಚಿಸಿದ್ದೇನೆ. ತಕ್ಷಣ ಆರೋಪಗಳ ಬಂಧನಕ್ಕೆ ಸೂಚಿಸಿದ್ದೇನೆ. 24 ಗಂಟೆಯೊಳಗೆ ಕೊಲೆ ಆರೋಪಿಯನ್ನ ಬಂಧಿಸುತ್ತೇವೆ ಎಂದರು.

ಛಲವಾದಿಪಾಳ್ಯ ವಾರ್ಡ್ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಅವರನ್ನ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆಗೈದಿದ್ದು, ಕೊಲೆಗೆ ಹಳೆಯ ದ್ವೇಷವೇ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ.

Key words: former corporator -Rekha Kadiresh- Murder case –CM BS yeddyurappa