ಕಪ್ ಎಲ್ಲವೂ ಅವರದ್ಧೇ ಆದ್ರೆ ಸರ್ಕಾರ ಮಾತ್ರ ನಮ್ಮದು: ಆರ್.ಅಶೋಕ್ ಗೆ ಮಾಜಿ ಡಿಸಿಎಂ ಪರಮೇಶ್ವರ್ ತಿರುಗೇಟು.

Promotion

ಬೆಂಗಳೂರು,ಮೇ,12,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಈ ಸಾರಿ ಕಪ್ ನಮ್ಮದೇ ಎಂದಿದ್ದ ಬಿಜೆಪಿ ಅಭ್ಯರ್ಥಿ ಆರ್.ಅಶೋಕ್ಗೆ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ.

ಇಂದು ಸದಾಶಿವನಗರದಲ್ಲಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದ ಬಳಿಕ ಮಾತನಾಡಿದ ಡಾ.ಜಿ.ಪರಮೇಶ್ವರ್, ಸ್ವಂತ ಬಲದ ಮೇಲೆ ನಾವು ಸರ್ಕಾರ ರಚನೆ ಮಾಡುತ್ತೇವೆ. ಈ ಚುನಾವಣೆಯಲ್ಲಿ ನಾವು 130ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಜಿಲ್ಲಾವಾರು ಮಾಹಿತಿ ಪಡೆದುಕೊಂಡಿದ್ದೇವೆ. ಮುಖ್ಯಮಂತ್ರಿ ಆಯ್ಕೆ ಬಗ್ಗೆ ಹೈಕಮಾಂಡ್​ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದರು.

Key words: Former DCM-Dr.G.Parameshwar-meet-AICC-President-Mallikarjuna kharge