‘ಕಮಲ’ ಹಿಡಿದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ: ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ…

ನವದೆಹಲಿ,ಆ,25,2020(www.justikannada.in):   ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿ ಸಾಕಷ್ಟು ಹೆಸರು ಮಾಡಿದ್ದ ಅಣ್ಣಮಲೈ ಇದೀಗ ತಮಿಳುನಾಡು ಪಾಲಿಟಿಕ್ಸ್ ಗೆ ಎಂಟ್ರಿ ಕೊಟ್ಟಿದ್ದಾರೆ.jk-logo-justkannada-logo

ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ. ಅಧಿಕೃತವಾಗಿ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಹಿರಿಯ ನಾಯಕರ ಸಮ್ಮುಖದಲ್ಲಿ  ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕರ್ನಾಟಕ- ತಮಿಳುನಾಡು ಉಸ್ತುವಾರಿ ಮುರುಳಿಧರ್ ರಾವ್ ಅಣ್ಣಾಮಲೈ ಅವರಿಗೆ ಪ್ರಾಥಮಿಕ ಸದಸ್ಯತ್ವ ನೀಡಿ ಸ್ವಾಗತಿಸಿದರು. ತಮಿಳುನಾಡು ಬಿಜೆಪಿ ಅಧ್ಯಕ್ಷ ಮುರುಗನ್ ಉಪಸ್ಥಿತರಿದ್ದರು. Former IPS officer- Annamalai-join- BJP

ಐಪಿಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಹಲವು ಭಾಗಗಳಲ್ಲಿ ಸೇವೆ ಸಲ್ಲಿಸಿ ಜನಮನ ಗೆದ್ಧಿದ್ದ ಅಣ್ಣಾಮಲೈ ಅವರು ಕಳೆದ ಒಂದು ವರ್ಷದ ಹಿಂದೆ ತಮ್ಮ ಸೇವೆಗೆ ರಾಜೀನಾಮೆ ನೀಡಿದ್ದರು.

Key words: Former IPS officer- Annamalai-join- BJP