ಕಾಂಗ್ರೆಸ್ ಗೆ ಮಾಜಿ ಸಚಿವ ಎಕೆ ಆಂಟನಿ ಪುತ್ರ ಅನಿಲ್ ಆಂಟನಿ ರಾಜೀನಾಮೆ.

Promotion

ಬೆಂಗಳೂರು,ಜನವರಿ,25,2023(www.justkannada.in):  ಕಾಂಗ್ರೆಸ್​ನ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಎಕೆ ಆಂಟನಿ ಅವರ ಪುತ್ರ ಅನಿಲ್ ಆಂಟನಿ ಕಾಂಗ್ರೆಸ್ ಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಎಕೆ ಆಂಟನಿ ಪುತ್ರ ಅನಿಲ್ ಕೆ ಆಂಟನಿ ಕಾಂಗ್ರೆಸ್ ಪಕ್ಷ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ಅನಿಲ್ ಆಂಟನಿ ಕಾಂಗ್ರೆಸ್‌ ನ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದೇನೆ. ಬಿಬಿಸಿ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ಟ್ವೀಟ್ ಡಿಲೀಟ್ ಮಾಡಲು ತುಂಬಾ ಒತ್ತಡವಿತ್ತು, ಆದರೆ ಅದನ್ನು ನಾನು ನಿರಾಕರಿಸಿದೆ ಎಂದು ಬರೆದುಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು 2002 ರ ಗುಜರಾತ್ ಗಲಭೆಗಳ ಕುರಿತು ಬಿಬಿಸಿ ಮಾಡಿದ ಸಾಕ್ಷ್ಯಚಿತ್ರದಲ್ಲಿ ಅನಿಲ್ ಆಂಟನಿ ಸರ್ಕಾರವನ್ನು ಬೆಂಬಲಿಸಿದ್ದರು. ಇದಾದ ಬಳಿಕ ಕಾಂಗ್ರೆಸ್‌ ನಲ್ಲಿ ಅವರಿಗೆ ವಿರೋಧ ವ್ಯಕ್ತವಾಗಿದ್ದು, ಟ್ವೀಟ್ ಹಿಂಪಡೆಯುವಂತೆ ಒತ್ತಡ ಹೇರಲಾಗಿತ್ತು.

ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತನಾಡುವ ಇಂತಹವರು ಟ್ವೀಟ್ ಡಿಲೀಟ್ ಮಾಡುವಂತೆ ಒತ್ತಡ ಹೇರುತ್ತಿದ್ದರು. ಹೀಗಾಗಿ ನಾನು ಕಾಂಗ್ರೆಸ್‌ ನ ನನ್ನ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದೇನೆ ಎಂದು ಅನಿಲ್ ಆಂಟನಿ ತಿಳಿಸಿದ್ದಾರೆ.

Key words: Former minister- AK Antony- son -Anil Antony- resigned – Congress