ಇಂದು ಇಡಿ ವಿಚಾರಣೆಗೆ ಹಾಜರಾಗಲಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್….

Promotion

ಬೆಂಗಳೂರು,ಆ,30,2019(www.justkannada.in):  ದೆಹಲಿ ನಿವಾಸದ ಮೇಲೆ ಐಟಿ ದಾಳಿ  ವೇಳೆ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಮನ್ಸ್ ನೀಡಿರುವ ಹಿನ್ನೆಲೆ ಇಂದು ಮಾಜಿ ಸಚಿವ ಡಿ.ಕೆ ಶಿವ ಕುಮಾರ್ ವಿಚಾರಣೆಗೆ ಹಾಜರಾಗಲಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ ಶಿವಕುಮಾರ್ ಇಡಿ ಸಮನ್ಸ್ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಇಡಿ ಸಮನ್ಸ್ ಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿ ಡಿಕೆ ಶಿವಕುಮಾರ್ ಅವರ ಅರ್ಜಿ ವಜಾಗೊಳಿಸಿದೆ. ಈ ಹಿನ್ನೆಲೆ ಇಡಿ ವಿಚಾರಣೆಗೆ ಹಾಜರಾಗಲು ಇಂದು ನವದೆಹಲಿಗೆ ಕುಟುಂಬ ಸಮೇತ ಮಾಜಿ ಸಚಿವ ಡಿ.ಕೆ ಶಿವಕುಮಾರ್ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಅವರು, ”ಇಂದು ನಾನು ವಕೀಲರನ್ನು ಭೇಟಿ ಮಾಡಬೇಕಿದೆ. ಬಳಿಕ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸುತ್ತೇನೆ. ಅದರ ನಂತರ ದೆಹಲಿಗೆ ತೆರಳುತ್ತೇನೆ. ಈಗಾಗಲೇ ವಿಮಾನ ಬುಕ್ ಮಾಡಿದ್ದೇನೆ. ಮಧ್ಯಾಹ್ನ 1 ಗಂಟೆಗೆ ವಿಚಾರಣೆಗೆ ಬರುವಂತೆ ಸಮನ್ಸ್ ನೀಡಲಾಗಿದೆ. ವಿಚಾರಣೆಗೆ ಹಾಜರಾಗುತ್ತೇನೆ” ಎಂದು ತಿಳಿಸಿದ್ದಾರೆ.

Key words: Former minister -DK Sivakumar – attend – ED -hearing -today.