ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಇಂದು ಸಿಗಲಿಲ್ಲ ರಿಲೀಫ್ : ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ….

Promotion

ನವದೆಹಲಿ,ಸೆ,19,2019(www.justkannada.in): ಅಕ್ರಮ ಹಣ ವರ್ಗಾವಣೆ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಮತ್ತೆ ಎರಡು ದಿನ ಜೈಲಿನಲ್ಲೇ ಕಳೆಯಬೇಕಿದೆ.

ನವದೆಹಲಿಯ ರೋಸ್ ಅವೆನ್ಯೂ ಕೋರ್ಟ್  ಜಾಮೀನು ಅರ್ಜಿ ವಿಚಾರಣೆಯನ್ನ ಶನಿವಾರಕ್ಕೆ ಮುಂದೂಡಿದೆ. ಮಾಜಿ ಸಚಿವ ಡಿಕೆ.ಶಿವಕುಮಾರ್ ತಿಹಾರ್ ಜೈಲಿನಲ್ಲಿದ್ದು ಇಂದು ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದರು. ಇಂದು ವಿಚಾರಣೆ ಆರಂಭವಾಗಿ ಇಡಿ ಪರ ವಕೀಲ ನಟರಾಜ್ ವಾದ ಮಂಡಿಸಿದರು.

ಆದರೆ ಕೋರ್ಟ್ ವಿಚಾರಣೆಯನ್ನ ಶನಿವಾರ ಬೆಳಿಗ್ಗೆ 11 ಗಂಟೆಗೆ ಮುಂದೂಡಿದೆ. ಹೈ ಬಿಪಿ ಶುಗರ್ ನಿಂದಾಗಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ನವದೆಹಲಿಯ ಆರ್ ಎಂಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.  ಆದರೆ ವೈದ್ಯರು ಆರೋಗ್ಯ ಸ್ಥಿರವಾಗಿದೆ ಎಂದು ವರದಿ ನೀಡಿದ ಹಿನ್ನೆಲೆ ಇಂದು ಬೆಳಿಗ್ಗೆ ಡಿ.ಕೆ ಶಿವಕುಮಾರ್ ಅವರನ್ನ ತಿಹಾರ್ ಜೈಲಿಗೆ ಶಿಫ್ಟ್ ಮಾಡಲಾಗಿತ್ತು.

Key words:   Former minister- DK Sivakumar – Bail application- postponed