ಇಂದಿಗೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ನ್ಯಾಯಾಂಗ ಬಂಧನ ಅವಧಿ ಅಂತ್ಯ..

ನವದೆಹಲಿ,ಅ,15,2019(www.justkannada.in):  ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಂಧಿತರಾಗಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯಗೊಳ್ಳಲಿದೆ.

ಪ್ರಕರಣ ಸಂಬಂಧ ನವದೆಹಲಿಯ ರೋಸ್ ಅವೆನ್ಯೂ ಕೋರ್ಟ್  ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇಂದಿಗೆ ನ್ಯಾಯಾಂಗ ಬಂಧನ ಮುಕ್ತಾಯವಾಗಲಿದ್ದು ಕೋರ್ಟ್ ಗೆ ಡಿಕೆಶಿ ಅವರನ್ನ  ಪೊಲೀಸರು ಹಾಜರುಪಡಿಸಲಿದ್ದಾರೆ. ಕಳೆದ 28

ಇನ್ನು ಇಡಿ ಅಧಿಕಾರಿಗಳು ಡಿಕೆ ಶಿವಕುಮಾರ್ ಅವರನ್ನ ತಮ್ಮ ವಶಕ್ಕೆ ನೀಡುವಂತೆ ಕೇಳುವ ಸಾಧ್ಯತೆ ಇದೆ. ಇನ್ನೊಂದೆಡೆ ನವದೆಹಲಿಯ ಹೈಕೋರ್ಟ್ ನಲ್ಲಿ ಡಿ.ಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು ಡಿಕೆಶಿ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ, ಮುಕುಲ್ ರೋಹ್ಟಗಿ ವಾದ ಮಂಡಿಸಲಿದ್ದಾರೆ. ಹಾಗೆಯೇ ಇಂದು ವಿಚಾರಣೆಗೆ ಹಾಜರಾಗುವಂತೆ ಡಿಕೆಶಿ ಅವರ ತಾಯಿ ಗೌರಮ್ಮಗೆ ಸಮನ್ಸ್ ನೀಡಿದ್ದಾರೆ.

Key words: Former Minister -DK Sivakumar – ended – judicial custody