ನಾಳೆ ಮೈಸೂರಿಗೆ ಮಾಜಿ ಸಚಿವ ಡಿ.ಕೆ ಶಿವಕುಮಾರ್…

Promotion

ಮೈಸೂರು,ನ,6,2019(www.justkannada.in):  ಮಾಜಿ ಸಚಿವ ಡಿ.ಕೆ ಶಿವಕುಮಾರ್ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಭವ್ಯ ಸ್ವಾಗತ ನೀಡಲಾಗುವುದು ಎಂದು ಕಾಂಗ್ರೆಸ್ ನಗರಾದ್ಯಕ್ಷ ಮೂರ್ತಿ ತಿಳಿಸಿದರು.

ನಾಳೆ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಮೈಸೂರಿಗೆ ಆಗಮಿಸುತ್ತಿರುವ ಹಿನ್ನೆಲೆ, ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಇಂದು ನಗರದ ಜಿಲ್ಲಾಪತ್ರಕರ್ತರ ಸಂಘದಲ್ಲಿ  ಸುದ್ದಿಗೋಷ್ಠಿ ನಡೆಯಿತು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಗರಾದ್ಯಕ್ಷ ಮೂರ್ತಿ, ನಾಳೆ ಕಾಂಗ್ರೆಸ್ ‌ಮುಖಂಡ ಡಿಕೆಶಿ ಮೈಸೂರಿಗೆ ಅಗಮಿಸುತ್ತಿದ್ದಾರೆ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಭವ್ಯ ಸ್ವಾಗತ ನೀಡಲಾಗುವುದು. ಸುಮಾರು 5 ಸಾವಿರಕ್ಕು ಹೆಚ್ವು ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಕಾಂಗ್ರೆಸ್ ನೂತನ ಕಚೇರಿ ಇದೆ ಮೊದಲ ಬಾರಿಗೆ ಆಗಮಿಸುತ್ತಿದ್ದಾರೆ. ಹಾಗಾಗಿ ಅವರಿಗೆ ಸನ್ಮಾನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಜತೆಗೆ ಡಿಕೆ ಶಿವಕುಮಾರ್ ಗೆ ಸ್ವಾಗತ ಕೋರಲು ಜಿಲ್ಲೆಯ ಎಲ್ಲಾ ಚುನಾಯಿತ ಜನಪ್ರತಿನಿಧಿಗಳು ಕಾರ್ಯಕರ್ತರು ಭಾಗವಹಿಸಲಿದ್ದಾರೆ. ರೈಲ್ವೆ ನಿಲ್ದಾಣದಿಂದ ಕಾಂಗ್ರೆಸ್ ಕಚೇರಿವರೆಗೆ ಮೆರವಣಿಗೆ ಮೂಲಕ ಅವರನ್ನ ಕಾಂಗ್ರೆಸ್ ಕಚೇರಿಗೆ ಕರೆತರಲಾಗುವುದು ಎಂದು ಮೂರ್ತಿ ತಿಳಿಸಿದರು

Key words: Former Minister DK Sivakumar – tomorrow-visit- Mysore