ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್.

Promotion

ಬೆಂಗಳೂರು,ಮೇ,7,2022(www.justkannada.in):  ಕೆಪಿಸಿಸಿ ಉಪಾಧ್ಯಕ್ಷರಾಗಿದ್ಧ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕಾಂಗ್ರೆಸ್ ಸದಸ್ಯತ್ವಕ್ಕೆ  ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಸ್ಥಾನಕ್ಕೂ ಪ್ರಮೋದ್ ಮಧ್ವರಾಜ್  ರಾಜೀನಾಮೆ ನೀಡಿದ್ದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ  ರಾಜೀನಾಮೆ ಪತ್ರ ರವಾನಿಸಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಗೆ ಬಿಗ್ ಶಾಕ್ ನೀಡಿದ್ದಾರೆ.

ಕಳೆದ ಕಾಂಗ್ರೆಸ್ ಸರ್ಕಾರದ  ಅವಧಿಯಲ್ಲಿ, ಪ್ರಮೋಧ್ ಮಧ್ವರಾಜ್ ಅವರು ಕ್ರೀಡಾ ಸಚಿವರಾಗಿದ್ದರು. ಇದೀಗ ಕಾಂಗ್ರಸ್ ಗೆ ಗುಡ್ ಬೈ ಹೇಳಿರುವ ಪ್ರಮೋದ್ ಮಧ್ವರಾಜ್ ಅವರ ಮುಂದಿನ ನಡೆ ಏನು ಎಂಬ ಬಗ್ಗೆ ಕುತೂಹಲ ಉಂಟಾಗಿದೆ.

Key words: Former minister -Pramod Madhvaraj- goodbye – Congress.