ಶಾಸಕ ಸ್ಥಾನದ ರಾಜೀನಾಮೆ ಬಗ್ಗೆ ಮುಂಬೈನಲ್ಲಿ ತೀರ್ಮಾನ- ಮಾಜಿ ಸಚಿವ ರಮೇಶ್ ಜಾರಕಿಹೊಳಿ.

ಮೈಸೂರು,ಜೂನ್,25,2021(www.justkannada.in):  ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ  ವಿಚಾರ ಮುಂಬೈ‌ನಲ್ಲಿ ತೀರ್ಮಾನ ಆಗಲಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.jk

ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದರು. ರಮೇಶ್ ಜಾರಕಿಹೊಳಿಗೆ ಸಹೋದರ ಲಖನ್, ಅಳಿಯ ಅಭಿರಾಂ ಸಾಥ್ ನೀಡಿದರು.

ಇನ್ನು ಮಾಧ್ಯಮಗಳ ಜತೆ ಮಾತನಾಡಿದ ರಮೇಶ್ ಜಾರಕಿಹೊಳಿ, ಸದ್ಯಕ್ಕೆ ಇಲ್ಲಿ ಬಂದಿರೋದು ಸ್ವಾಮೀಜಿಯನ್ನ ಭೇಟಿ ಮಾಡುವುದಕ್ಕೆ. ಸಿಎಂ ಬಂದು ಭೇಟಿ ಮಾಡಿ ಎಂದಿರೋದು ನನಗೆ ಗೊತ್ತಿಲ್ಲ. ಮುಂಬಯಿಗೆ ಹೋಗಿರೋದು ರಾಜಕೀಯ ಇರಬಹುದು. ಆದರೆ ಇಲ್ಲಿ ಸ್ವಾಮೀಜಿ ಅವರ ತಾಯಿ ಮೃತಪಟ್ಟ ಕಾರಣ ಇಲ್ಲಿಗೆ ಬಂದಿದ್ದೇನೆ ಎಂದು ತಿಳಿಸಿದರು.

ಸರ್ಕಾರ ತಂದವನು ನಾನು, ನಾನು ಮಂತ್ರಿ ಸ್ಥಾನ ಕೇಳ್ತಿನಾ. ಮಂತ್ರಿಗೋಸ್ಕರ ನಾನು ಸ್ವಾಮೀಜಿಯನ್ನ ಭೇಟಿ  ಮಾಡುತ್ತಿಲ್ಲ. ರಾಜೀನಾಮೆ ಈಗಲ್ಲ, ಮುಂಬೈನಲ್ಲಿ ಹೋಗಿ ಮಾತಾಡುತ್ತೇನೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದರು.

ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಮಾಡಿದ್ದು ಸತ್ಯ.

ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಮಾಡಿದ್ದು ಸತ್ಯ. ಆದರೆ ಕೆಲವು ಹಿರಿಯರ ಸಲಹೆ ಮೇರೆಗೆ ಈಗ ಅದನ್ನ ಕೈಬಿಟ್ಟಿದ್ದೇನೆ. ಇನ್ನು 8 ರಿಂದ 10 ದಿನ ನನಗೆ ಮಾಧ್ಯಮದವರು ಬಿಟ್ಟು ಬಿಡಿ. ನಾನು ಅಲ್ಲಿಯವರೆಗು ಏನು ಮಾತಾಡಲ್ಲ. ನಾನು ಮನಸ್ಸುನೊಂದು ರಾಜೀನಾಮೆ ನಿರ್ಧಾರ ಮಾಡಿದ್ದು ನಿಜ ಎಂದು ರಮೇಶ್ ಜಾರಕಿಹೊಳಿ ಹೇಳಿದರು.

ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ.

ರಾಜೀನಾಮೆ ಕೊಟ್ಟರು ನಾನೊಬ್ಬನೇ ಕೊಡ್ತೇನೆ. ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಮುಳುಗುವ ಹಡಗು ನಾನೇಕೆ ಆ ಪಕ್ಷಕ್ಕೆ ಹೋಗಲಿ. ಬಿಜೆಪಿ ಪಕ್ಷ ನನ್ನನ್ನು ಬಹಳ ಗೌರವಯುತವಾಗಿ ನಡೆಸಿಕೊಂಡಿದೆ. ನಾನು ಬಿಜೆಪಿಗೆ ದ್ರೋಹ ಮಾಡುವ ಕೆಲಸ ಎಂದಿಗೂ ಮಾಡೋದಿಲ್ಲ. ನಾನು ಮುಂಬೈಗೆ ಹೋಗಿದ್ದು ಸತ್ಯ. ದೇವೇಂದ್ರ ಫಡ್ನವಿಸ್ ನನ್ನ ರಾಜಕೀಯ ಗಾಡ್ ಫಾದರ್. ಅವರ ಬಳಿ ನನ್ನ ಮನಸ್ಸಿನ ನೋವುಗಳನ್ನ ಹೇಳಿಕೊಂಡಿದ್ದೇನೆ ಎಂದು  ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.

ಸರ್ಕಾರ ಬೀಳಿಸಿ ಸರ್ಕಾರ ರಚಿಸುವ ಶಕ್ತಿ ದೇವರು ಕೊಟ್ಟಿದ್ದಾನೆ.

ಸರ್ಕಾರ ಬೀಳಿಸಿ ಸರ್ಕಾರ ರಚಿಸುವ ಶಕ್ತಿ ದೇವರು ಕೊಟ್ಟಿದ್ದಾನೆ. ಇಂತಹ ನಾನು ಸಚಿವನಾಗುವುದಕ್ಕೆ ಲಾಭಿ ಮಾಡುತ್ತೇನಾ.? ನನಗೆ ಇನ್ನು ಆ ಸ್ಥಿತಿ ಬಂದಿಲ್ಲ. ಸ್ವಾಮೀಜಿ ಅವರ ಬಳಿ ಬಂದು ಸಚಿವ ಸ್ಥಾನಕ್ಕೆ ಒತ್ತಡ ಹಾಕಿಸುವ ಸ್ಥಿತಿಗೆ ನಾನು ಬಂದಿಲ್ಲ. ನಾನು ಸ್ವಾಮೀಜಿ ಬಳಿ ಬಂದಿದ್ದು ಅವರ ಮಾತೃ ಶ್ರೀ ನಿಧನಕ್ಕೆ ಸಂತಾಪ ಸೂಚಿಸಲು ಬಂದಿದ್ದೆ. ಇಲ್ಲಿ ಯಾವ ರಾಜಕಾರಣವನ್ನು ಚರ್ಚೆ ಮಾಡಿಲ್ಲ. ಇನ್ನೊಬ್ಬರನ್ನ ಸಚಿವನ್ನಾಗಿ ಮಾಡುವ ಶಕ್ತಿ ಇರುವ ನಾನು.ನಾನು ಸಚಿವನಾಗೋಕೆ ಲಾಬಿ ಮಾಡುತ್ತೇನಾ.? ಇರುವ ಶಾಸಕ ಸ್ಥಾನವನ್ನೇ ಬಿಡುವ ಚಿಂತನೆ‌ ಮಾಡಿದ್ದವನು ನಾನು. ಇಲ್ಲಿ ಸಚಿವ ಸ್ಥಾನದ ಲಾಬಿ ಮಾಡುವ ಪ್ರಶ್ನೆಯೇ ಇಲ್ಲ ಎಂದರು.

ಯಡಿಯೂರಪ್ಪ ಎರಡು ವರ್ಷ ಪೂರೈಸುತ್ತಾರೆ. ಮುಂದಿನ ಚುನಾವಣೆಯು ಅವರ ನೇತೃತ್ವದಲ್ಲಿ ನಡೆಯಲಿದೆ. ನಾವು ಮತ್ತೇ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.

Key words: Former Minister -Ramesh Jarakiholi-visit-mysore –suttur math