ತುಮಕೂರು ಕ್ಷೇತ್ರದಿಂದ ಟಿಕೆಟ್ ಮಿಸ್:  ಬಿಜೆಪಿಗೆ  ಮಾಜಿ ಸಚಿವ ಸೊಗಡು ಶಿವಣ್ಣ ರಾಜೀನಾಮೆ.

Promotion

ತುಮಕೂರು,ಏಪ್ರಿಲ್,13,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾದ ಬೆನ್ನಲ್ಲೆ ಟಿಕೆಟ್ ಸಿಗದಿದ್ದಕ್ಕೆ ಅಸಮಾಧಾನಗೊಂಡು ಪಕ್ಷ ಬಿಡುವವರ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಮಾಜಿ ಸಚಿವ ಸೊಗಡು ಶಿವಣ್ಣ ಸಹ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಮಾಜಿ ಸಚಿವ ಸೊಗಡು ಶಿವಣ್ಣ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ರಾಜೀನಾಮೆ ಸಲ್ಲಿಸಿದ್ದೇನೆ ಇಮೇಲ್ ಮೂಲಕ ರಾಜೀನಾಮೆ ನೀಡಿದ್ದೇನೆ. ತುಮಕೂರು ನಗರ ಕ್ಷೇತ್ರ ದಿಂದ ನಾನು ಸ್ಪರ್ಧಿಸುವುದು ಖಚಿತ. ನಮ್ಮ ಕಾರ್ಯಕರ್ತರ ಜೊತೆ ಸಭೆ ನಡೆಸಿ ತೀರ್ಮಾನ ಮಾಡುತ್ತೇನೆ. ಪಕ್ಷೇತರವಾಗಿ ಸ್ಪರ್ಧಿಸಬೇಕಾ..? ಅಥವಾ ಬೇರೆ ಪಕ್ಷದಿಂದ ಸ್ಪರ್ಧಿಸಬೇಕಾ ಎಂದು ತೀರ್ಮಾನಿಸುತ್ತೇನೆ.  ನಾನು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ ಎಂದಿದ್ದಾರೆ.

Key words: Former minister- Sogadu Shivanna- resigned – BJP