ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿಯಾದ ಮಾಜಿ ಸಚಿವ ಶ್ರೀರಾಮುಲು.

Promotion

ಬೆಂಗಳೂರು,ನವೆಂಬರ್,20,2023(www.justkannada.in):   ಮಾಜಿ ಸಚಿವ ಶ್ರೀರಾಮುಲು ಅವರು ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನ ಭೇಟಿಯಾಗಿ ಪುತ್ರಿಯ ವಿವಾಹ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ಸಿಎಂ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ಧರಾಮಯ್ಯರನ್ನ ಸದಾಶಿವನಗರದಲ್ಲಿರುವ ನಿವಾಸದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ರನ್ನು ಭೇಟಿಯಾಗಿ ಪುತ್ರಿ ವಿವಾಹ ಕಾರ್ಯಕ್ರಮದ ಆಮಂತ್ರಣ ನೀಡಿ ಮದುವೆಗೆ ಆಹ್ವಾನಿಸಿದ್ದಾರೆ.

ಬಳಿಕ ಮಾತನಾಡಿದ ಶ್ರೀರಾಮುಲು, ಡಿಸಿಎಂ ಕೂಡ ಮದುವೆಗೆ ಬರುವುದಾಗಿ ಹೇಳಿದ್ದಾರೆ. ಸಿಎಂ ಜೊತೆ ಯಾವುದೇ ರಾಜಕೀಯ ವಿಚಾರ ಚರ್ಚೆ ಮಾಡಿಲ್ಲ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ ಮಾಡಿದ್ದಕ್ಕೆ  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸಮಾಧಾನ ವಿಚಾರ ಕುರಿತು ಪ್ರತಿಕ್ರಿಯಿಸಿದ ಶ್ರೀರಾಮುಲು,  ಬಿವೈ ವಿಜಯೇಂದ್ರ ಕಿರಿಯರು ಒಪ್ತೀನಿ.  ಆದರೆ ಹೈಕಮಾಂಡ್ ಅವಕಾಶ ಮಾಡಿಕೊಟ್ಟಿದೆ ಎಲ್ಲಾ ನಾಯಕರೂ ಸಹಕಾರ ನೀಡಬೇಕು ಪಾರ್ಟಿ ತೀರ್ಮಾನವೇ ಅಂತಿಮ ನಿರ್ಧಾರ. ಅಸಮಾಧಾನ ಶಮನ ಮಾಡುತ್ತೇವೆ ಎಂದು ತಿಳಿಸಿದರು.

Key words: Former minister -Sriramulu –met-CM- Siddaramaiah – DCM -DK Shivakumar.