Sunday, September 20, 2026

BDA Apartments

ಮಾಜಿ ಶಾಸಕ ಹಾಗೂ ಬಿಜೆಪಿಯ ಹಿರಿಯ ನಾಯಕ ಎ.ಜಿ. ಕೊಡ್ಗಿ ನಿಧನ BDA JK_Adv BDA Adv
Home Front Page ಮಾಜಿ ಶಾಸಕ ಹಾಗೂ ಬಿಜೆಪಿಯ ಹಿರಿಯ ನಾಯಕ ಎ.ಜಿ. ಕೊಡ್ಗಿ ನಿಧನ.

ಮಾಜಿ ಶಾಸಕ ಹಾಗೂ ಬಿಜೆಪಿಯ ಹಿರಿಯ ನಾಯಕ ಎ.ಜಿ. ಕೊಡ್ಗಿ ನಿಧನ.

ಮಂಗಳೂರು,ಜೂನ್,13,2022(www.justkannada.in):  ಮಾಜಿ ಶಾಸಕ, ಬಿಜೆಪಿ ಹಿರಿಯ ನಾಯಕ ಎ.ಜಿ. ಕೊಡ್ಗಿ(93) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎ.ಜಿ.ಕೊಡ್ಗಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.  ಎ.ಜಿ. ಕೊಡ್ಗಿ  ಅವರು ಬೈಂದೂರು ಶಾಸಕರಾಗಿ, ಕರ್ನಾಟಕ ಬ್ಯಾಂಕ್ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಈ ಮಧ್ಯೆ  2006-08ರವರೆಗೆ ರಾಜ್ಯ ಮೂರನೇ ಹಣಕಾಸು ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.ಮಾಜಿ ಶಾಸಕ ಹಾಗೂ ಬಿಜೆಪಿಯ ಹಿರಿಯ ನಾಯಕ ಎ.ಜಿ. ಕೊಡ್ಗಿ ನಿಧನ kofgi

ಎ.ಜಿ. ಕೊಡ್ಗಿ ಕೆಲ ವರ್ಷಗಳಿಂದ ರಾಜಕಾರಣದಿಂದ ದೂರ ಸರಿದಿದ್ದರು. ಅಮಾಸೆಬೈಲ್ ಚಾರಿಟೇಬಲ್ ಟ್ರಸ್ಟ್ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು ಎನ್ನಲಾಗಿದೆ.

Key words: Former MLA – senior- BJP-leader –AG Kodgi -died.