ಮಾಜಿ ಶಾಸಕ ವೈಎಸ್ ವಿ ದತ್ತ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ ಖಚಿತ.

Promotion

ಬೆಂಗಳೂರು,ಡಿಸೆಂಬರ್,14,2022(www.justkannada.in): ಮಾಜಿ ಶಾಸಕ ವೈಎಸ್ ವಿ ದತ್ತ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಳ್ಳುವುದು ಖಚಿತವಾಗಿದೆ.

ಹೌದು ಈ ಕುರಿತು ಸ್ವತಃ ವೈಎಸ್ ವಿ ದತ್ತಾ ಅವರೇ ಪ್ರತಿಕ್ರಿಯಿಸಿದ್ದಾರೆ. ಶೀಘ್ರವೇ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರುತ್ತೇನೆ. ಈಗಾಗಲೇ ಮಾಜಿ ಸಿಎಂ  ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್  ಭೇಟಿಯಾಗಿ ಚರ್ಚೆ ನಡೆಸಿದ್ದೇನೆ.

ಹಲವರು ಬಾರಿ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿ ಮಾತನಾಡಿರುವೆ  ವಿಧಾನಸಭಾ ಕ್ಷೇತ್ರದ ಬಗ್ಗೆ ಈಗಾಗಲೇ ಚರ್ಚೆ ನಡೆಸಿದ್ದೇನೆ ಎಂದು ವೈಎಸ್ ವಿ ದತ್ತ ತಿಳಿಸಿದ್ದಾರೆ. ಈ ಮೂಲಕ ಜೆಡಿಎಸ್ ತೊರೆಯುವುದಾಗಿ ಅಧಿಕೃತವಾಗಿ ಹೇಳಿದ್ದಾರೆ.

Key words: Former MLA- YS V Dutta – leave- JDS – join- Congress.