ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಮತ್ತಷ್ಟು ಕ್ಷೀಣ..

Promotion

ನವದೆಹಲಿ,ಆ,24,2020(www.justkannada.in): ಕೊರೋನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ ಎಂದು ಆರ್ ಅಂಡ್ ಆರ್ ಆಸ್ಪತ್ರೆ ಮೂಲಗಳಿಂದ ತಿಳಿದು ಬಂದಿದೆ.jk-logo-justkannada-logo

ಆಸ್ಪತ್ರೆಯ ಆಡಳಿತ ಮಂಡಳಿಯು ಪ್ರಣಬ್ ಮುಖರ್ಜಿ ಅವರ ಆರೋಗ್ಯದ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು,  ಕೊರೋನಾ ಸೋಂಕಿಗೆ ತುತ್ತಾಗಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಕೆಲವು ದಿನಗಳ ಹಿಂದೆ ಮೆದುಳು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದರಿಂದ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಇದೀಗ ಮುಖರ್ಜಿ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ ಎಂದು ಮಾಹಿತಿ ನೀಡಿದೆ. Former President -Pranab Mukherjee- health- condition

‘ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಸುಧಾರಣೆಯಾಗಿಲ್ಲ’. ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡ ನಂತರ ಅವರು ದೀರ್ಘ ಕೋಮಾ ಸ್ಥಿತಿಯಲ್ಲಿದ್ದಾರೆ’ ಎಂದು  ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿದೆ.

Key words: Former President -Pranab Mukherjee- health- condition