ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂಗೆ ಬಿಗ್ ರಿಲೀಫ್: ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಸುಪ್ರೀಂಕೋರ್ಟ್…

ನವದೆಹಲಿ,ಡಿ,4,2019(www.justkannada.in):  ಐಎನ್‌ಎಕ್ಸ್ ಮೀಡಿಯಾ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿಂತೆ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂಗೆ ಸುಪ್ರೀಂಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಈ ಮೂಲಕ  ಪಿ.ಚಿದಂಬರಂಗೆ ಬಿಗ್ ರಿಲೀಫ್ ಸಿಕ್ಕಿದ್ದು 106 ದಿನಗಳ ಜೈಲುವಾಸ ಅಂತ್ಯವಾಗಿದೆ. ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿಆರ್ ಭಾನುಮತಿ ನೇತೃತ್ವದ ತ್ರಿಸದಸ್ಯಪೀಠ  ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಇಬ್ಬರು ಶ್ಯೂರಿಟಿ ನೀಡಬೇಕು 2 ಲಕ್ಷ ಠೇವಣಿ ನೀಡಬೇಕು. ಅಧಿಕಾರಿಗಳ ವಿಚಾರಣೆಗೆ ಸಹಕರಿಸಬೇಕು. ಪಾಸ್ ಪೂರ್ಟ್ ವಶಕ್ಕೆ ನೀಡುವಂತೆ ಸುಪ್ರೀಂಕೋರ್ಟ್ ಷರತ್ತು ವಿಧಿಸಿದೆ. ಹಾಗೆಯೇ  ಸಾರ್ವಜನಿಕ ಹೇಳಿಕೆ, ಸಂದರ್ಶನ ನೀಡದಂತೆ ಸುಪ್ರೀಂಕೋರ್ಟ್ ಸೂಚಿಸಿದೆ.

 ಐಎನ್‌ಎಕ್ಸ್‌ ಮೀಡಿಯಾ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್​ 16ರಂದು  ಪಿ.ಚಿದಂಬರಂ ಅವರನ್ನ ಬಂಧಿಸಲಾಗಿತ್ತು.  ಜಾಮೀನು ನೀಡುವಂತೆ ಪಿ. ಚಿದಂಬರಂ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯನ್ನ ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು.  ಇದೀಗ ಸುಪ್ರೀಂಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ.

Key words: former Union Minister- P Chidambaram- Supreme Court- granted- conditional bail.