ಸಾಲ ಜನರ ಕಣ್ಣೀರು ಒರೆಸಬೇಕಲ್ಲದೇ ಭ್ರಷ್ಟಾಚಾರಕ್ಕೆ ಬಳಕೆಯಾಗಬಾರದು : ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ 

kannada t-shirts

ಬೆಂಗಳೂರು,ಅಕ್ಟೋಬರ್,30,2020(www.justkannada.in) : ರಾಜ್ಯದ ಜನ ಮತ್ತು ರಾಜ್ಯದ ಆಸ್ತಿ ಒತ್ತೆ ಇಟ್ಟು ತರುವ ಸಾಲ ಜನರ ಕಣ್ಣೀರು ಒರೆಸಬೇಕಲ್ಲದೇ ಭ್ರಷ್ಟಾಚಾರಕ್ಕೆ ಬಳಕೆಯಾಗಬಾರದು. ಜನರ ಸಂಕಷ್ಟ ಪರಿಹರಿಸಲು ಬಳಕೆಯಾಗದ ಸಾಲವನ್ನು ರಾಜ್ಯದ ಜನ ಸಹಿಸುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.jk-logo-justkannada-logo

ರಾಜ್ಯಸರಕಾರವು 90,000 ಕೋಟಿಗೂ ಹೆಚ್ಚು ಮೊತ್ತದ ಸಾಲ ಮಾಡುತ್ತಿದೆ

ರಾಜ್ಯ ಸರ್ಕಾರವು ಸುಮಾರು 90,000 ಕೋಟಿಗೂ ಹೆಚ್ಚು ಮೊತ್ತದ ಸಾಲ ಮಾಡುತ್ತಿದೆ. ಈ ಹಣವು ಸದುಪಯೋಗವಾಗಬೇಕು. ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಭಾಗಗಳಲ್ಲಿ ಬೆಳೆದ ಬಹುಪಾಲು ಬೆಳೆಗಳು ಹಾನಿಗೊಳಗಾಗಿವೆ. ಜಿಲ್ಲಾಡಳಿತ ಸಂಪೂರ್ಣವಾಗಿ ಸಮೀಕ್ಷೆಯನ್ನೇ ಮಾಡಿಲ್ಲ. ಸರ್ಕಾರದ ಸಚಿವರುಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಂಪೂರ್ಣ ನಿರ್ಲಕ್ಷಿಸಿದ ಮೇಲೆ ತಹಶೀಲ್ದಾರ್, ಡಿ.ಸಿ.ಗಳು ಎಷ್ಟರ ಮಟ್ಟಿಗೆ ಜನರ ಜೊತೆ ನಿಲ್ಲಲು ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

ಗುಲ್ಬರ್ಗ ಜಿಲ್ಲಾಧಿಕಾರಿ ಸಮೀಕ್ಷೆ ಪ್ರಕಾರ ಅಲ್ಲಿ ಸುಮಾರು 20,000 ಮನೆಗಳಿಗೆ ಹಾನಿಯಾಗಿದೆ. ದವಸ ಧಾನ್ಯ, ಬಟ್ಟೆ ಬರೆ, ಪುಸ್ತಕ ಕೊಚ್ಚಿ ಹೋಗಿವೆ. ರಾಯಚೂರಿನಲ್ಲಿ 3 ದಿನಗಳ ಮಳೆಗೆ ಸುಮಾರು 80,000 ಹೆಕ್ಟೇರ್, ಯಾದಗಿರಿಯಲ್ಲಿ 50,000 ಹೆಕ್ಟೇರ್, ಕೊಪ್ಪಳ 8,000 ಹೆಕ್ಟೇರ್, ಬಳ್ಳಾರಿಯಲ್ಲೂ ಸಾವಿರಾರು ಹೆಕ್ಟೇರ್ ಬೆಳೆ ನಾಶವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಅಕ್ಟೋಬರ್ ತಿಂಗಳಲ್ಲಿ ಬಿದ್ದ ಮಳೆಯಿಂದಾಗಿ ಮುಕ್ಕಾಲು ರಾಜ್ಯವೇ ಕಂಗೆಟ್ಟು ಕೂತಿದೆ

ಸೆಪ್ಟೆಂಬರ್ ಅಂತ್ಯದವರೆಗೆ ರಾಜ್ಯದಲ್ಲಿ 8.68 ಲಕ್ಷ ಹೆಕ್ಟೇರ್ ಕೃಷಿ ಬೆಳೆ, 0.88 ಲಕ್ಷ ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿವೆ. ಅಂದರೆ 11 ಲಕ್ಷ ಹೆಕ್ಟೇರ್ ಗಳಲ್ಲಿ ಬೆಳೆದ ಬೆಳೆ ಸೆಪ್ಟೆಂಬರ್ ವರೆಗೆ ಹಾನಿಯಾಗಿದೆ. ಈಗ ಅಕ್ಟೋಬರ್ ತಿಂಗಳಲ್ಲಿ ಬಿದ್ದ ಮಳೆಯಿಂದಾಗಿ ಮುಕ್ಕಾಲು ರಾಜ್ಯವೇ ಕಂಗೆಟ್ಟು ಕೂತಿದೆ ಎಂದು ಕಿಡಿಕಾರಿದ್ದಾರೆ.

ಕೊಳೆತು ಹೋದ ಬೆಳೆಗಳಿಗೆ ಇನ್ನೂ ಪರಿಹಾರವನ್ನೇ ನೀಡಿಲ್ಲ

ಕೊಚ್ಚಿ ಹೋದ ಭೂಮಿಗೆ, ಕೊಳೆತು ಹೋದ ಬೆಳೆಗಳಿಗೆ ಇನ್ನೂ ಪರಿಹಾರವನ್ನೇ ನೀಡಿಲ್ಲವೆಂದು ನಾನು ಭೇಟಿಕೊಟ್ಟ ಗ್ರಾಮಗಳ ರೈತರು ಪದೇ ಪದೇ ಹೇಳುತ್ತಿದ್ದಾರೆ. ಕಳೆದ ವರ್ಷ ನದಿ ಪಾತ್ರಗಳ ಗ್ರಾಮಗಳ ಜನರು ತೀವ್ರ ನೋವು ಅನುಭವಿಸಿದರು. ಕಳೆದ ವರ್ಷ ಬಿದ್ದ 1ಲಕ್ಷಕ್ಕೂ ಹೆಚ್ಚುಮನೆಗಳಿಗೆ ಪರಿಹಾರ ನೀಡಿಲ್ಲ. ಕೇಂದ್ರ ಸರ್ಕಾರಕ್ಕೆ 2,47,000 ಮನೆಗಳಿಗೆ ಹಾನಿಯಾಗಿದೆ ಎಂದು ಮನವಿ ಸಲ್ಲಿಸಲಾಗಿದೆ. ಆದರೆ, ಪರಿಹಾರ ನೀಡಿರುವುದು ಕೇವಲ 1,24,000 ಮನೆಗಳಿಗೆ ಮಾತ್ರ. ಪೂರ್ಣ ಹಾನಿಯಾದ ಮನೆಗಳಿಗೆ ರೂ.5 ಲಕ್ಷ ನೀಡುವುದಾಗಿ ಹೇಳಿ ಇದುವರೆಗೆ ಕೇವಲ ರೂ.1 ಲಕ್ಷ ಮಾತ್ರ ನೀಡಲಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ನಷ್ಟ ಹಿಂದಿನ ಬಾರಿಗಿಂತ ಈ ಬಾರಿ ದುಪ್ಪಟ್ಟಾಗಿದೆ, ಪರಿಸ್ಥಿತಿ ಅಷ್ಟೇ ಗಂಭೀರವಾಗಿದೆ 

ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಶೇ.30 ಕ್ಕಿಂತ ಅಧಿಕ ಭಿತ್ತನೆಯಾಗಿದೆ. ಮಳೆ ಮತ್ತು ಪ್ರವಾಹದಿಂದಾಗಿ ಸಾವಿರಾರು ಎಕರೆ ಭೂಮಿಯಲ್ಲಿ ಬೆಳೆದ ಶೇಂಗಾ, ಈರುಳ್ಳಿ, ಅಡಿಕೆ, ಭತ್ತ, ಕಾಫಿ, ಮೆಣಸು, ಜೋಳ, ದ್ವಿದಳ ಧಾನ್ಯಗಳು, ಹತ್ತಿ, ರಾಗಿ, ಸಜ್ಜೆ ಮುಂತಾದ ಬೆಳೆಗಳೆಲ್ಲ ನಾಶವಾಗಿವೆ.  ಬೀದರ್, ಕಲ್ಬುರ್ಗಿ, ಯಾದಗಿರಿ ಜಿಲ್ಲೆಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ನಾನು ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನು ಕಣ್ಣಾರೆ ನೋಡಿದ್ದೇನೆ, ಸಂತ್ರಸ್ತರ ಕಷ್ಟಗಳನ್ನು ಕೇಳಿದ್ದೇನೆ. ಅಲ್ಲಿನ ನಷ್ಟ ಹಿಂದಿನ ಬಾರಿಗಿಂತ ದುಪ್ಪಟ್ಟಾಗಿದೆ, ಪರಿಸ್ಥಿತಿ ಅಷ್ಟೇ ಗಂಭೀರವಾಗಿದೆ ಎಂದು ಹೇಳಿದ್ದಾರೆ.

ತಕ್ಷಣ ವಿಧಾನ ಮಂಡಲದ ಅಧಿವೇಶನ ಕರೆಯಬೇಕುFormer,CM Siddaramaiah,warned,Debt,should,not,shed,people's,tears

ರಾಜ್ಯದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿರುವ ಪರಿಸ್ಥಿತಿಯನ್ನು ಚರ್ಚಿಸಲು ತಕ್ಷಣ ವಿಧಾನ ಮಂಡಲದ ಅಧಿವೇಶನ ಕರೆಯಬೇಕು. ನಮ್ಮ ಎಲ್ಲ ಶಾಸಕರಿಗೆ ತಮ್ಮ ಕ್ಷೇತ್ರದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿರುವ ಹಾನಿಯನ್ನು ಹೇಳಿಕೊಳ್ಳಲು ಅವಕಾಶ ನೀಡಬೇಕು. ಉತ್ತರ ಕರ್ನಾಟಕದ ನೆರೆಪರಿಸ್ಥಿತಿಗೆ ಕೇಂದ್ರದ ನೆರವು ಕೇಳುವ ಧೈರ್ಯ ಮುಖ್ಯಮಂತ್ರಿಯವರಿಗೆ ಇರದೆ ಇದ್ದರೆ ಸರ್ವಪಕ್ಷಗಳ ನಿಯೋಗವನ್ನು ಕರೆದುಕೊಂಡು ಹೋಗಿ. ನಾವು ರಾಜ್ಯದ ಸ್ಥಿತಿಯನ್ನು ವಿವರಿಸಿ ಹಣ ಬಿಡುಗಡೆ ಮಾಡುವಂತೆ ಒತ್ತಡ ಹಾಕುತ್ತೇವೆ ಎಂದು ಟ್ವೀಟರ್ ನಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ.

key words : Former-CM Siddaramaiah-warned-Debt-should-not -shed-people’s-tears

website developers in mysore