ಗುಜರಾತ್ ಮಾಜಿ ಮುಖ್ಯಮಂತ್ರಿ ಕೇಶುಭಾಯ್​ ಪಟೇಲ್​ ನಿಧನ

Promotion

ಬೆಂಗಳೂರು,ಅಕ್ಟೋಬರ್,29,2020(www.justkannada.in) : ಗುಜರಾತಿನ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ಮುಖಂಡ ಕೇಶುಭಾಯ್​ ಪಟೇಲ್​ (92) ಗುರುವಾರ ಕೊನೆಯುಸಿರೆಳೆದಿದ್ದಾರೆ.jk-logo-justkannada-logo

ಎರಡು ಅವಧಿಯಲ್ಲಿ ಮುಖ್ಯಮಂತ್ರಿಯಾಗಿ ಸೇವೆ

ಗುಜರಾತ್ ನಲ್ಲಿ ಎರಡು ಅವಧಿಯಲ್ಲಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಉಸಿರಾಡಲು ತೊಂದರೆಯಾಗುತ್ತಿದೆ ಎಂದು ಗುರುವಾರ ಬೆಳಗ್ಗೆ ಹೇಳಿಕೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ.

ಕಳೆದ ಸೆಪ್ಟೆಂಬರ್​ನಲ್ಲಿ ಕೊರೊನಾ ಪಾಸಿಟಿವ್​ ತುತ್ತಾಗಿದ್ದರು

ಕೇಶುಭಾಯ್​ ಪಟೇಲ್​ ಅವರಿಗೆ ಕಳೆದ ಸೆಪ್ಟೆಂಬರ್​ನಲ್ಲಿ ಕೊರೊನಾ ಪಾಸಿಟಿವ್​ ಆಗಿತ್ತು. ಆದರೆ, ಯಾವುದೇ ರೋಗ ಲಕ್ಷಣಗಳು ಇರಲಿಲ್ಲ. ಆದರೂ, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚೇತರಿಸಿಕೊಂಡಿದ್ದ ಅವರು ಇಂದು ಬೆಳಗ್ಗೆ ಅಹಮದಾಬಾದ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

 Former,Gujarat,Chief,Minister,Keshubhai Patel,passes,away

key words : Former-Gujarat-Chief-Minister-Keshubhai Patel-passes-away