ಹೊಂಡದಲ್ಲಿ ಬಿದ್ದು ಒಂದೇ ಕುಟುಂಬದ ನಾಲ್ವರು ಮಕ್ಕಳು ಸಾವು.

Promotion

ವಿಜಯನಗರ,ನವೆಂಬರ್,2,2022(www.justkannada.in): ಹೊಂಡದಲ್ಲಿ ಬಿದ್ದು ಒಂದೇ ಕುಟುಂಬದ ನಾಲ್ವರು ಮಕ್ಕಳು ಸಾವನ್ನಪ್ಪಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.

ವಿಜಯನಗರ ಹರಪನಹಳ್ಳಿ ತಾಲ್ಲೂಕಿನ ಚನ್ನಹಳ್ಳಿ ತಾಂಡದಲ್ಲಿ ಈ ಘಟನೆ ನಡೆದಿದೆ. ಅಭಿ (13) ಅಶ್ವಿನಿ(14), ಕಾವೇರಿ(18), ಅಪೂರ್ವಾ(18) ಮೃತಪಟ್ಟವರು.

ಹೊಂಡದಲ್ಲಿ ಮುಳುಗುತ್ತಿದ್ದ ತಮ್ಮನನ್ನ  ರಕ್ಷಣೆ ಮಾಡಲು ಮೂವರು ಸಹೋದರಿಯರು ಮುಂದಾಗಿದ್ದು ಈ ವೇಳೆ ನಾಲ್ವರು ಸಹ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತು ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Four children – same family- water-death