ರಾಜ್ಯದ ನಾಲ್ಕು ಕಾಲೇಜುಗಳಲ್ಲಿ ಕನ್ನಡದಲ್ಲೇ ಇಂಜಿನಿಯರಿಂಗ್ ಆರಂಭ- ಸಚಿವ ಅಶ್ವಥ್ ನಾರಾಯಣ್.

ಬೆಂಗಳೂರು,ಸೆಪ್ಟಂಬರ್,29,2021(www.justkannada.in): ರಾಜ್ಯದ ನಾಲ್ಕು ಕಾಲೇಜುಗಳಲ್ಲಿ ಕನ್ನಡ ಮಾಧ್ಯಮದಲ್ಲೇ  ಇಂಜಿನಿಯರಿಂಗ್ ಆರಂಭವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ತಿಳಿಸಿದರು.

ಈ ಕುರಿತು ಇಂದು ಮಾತನಾಡಿದ ಸಚಿವ ಅಶ್ವತ್ ನಾರಾಯಣ್,  ರಾಜ್ಯದ ನಾಲ್ಕು ಕಾಲೇಜುಗಳಲ್ಲಿ ಕನ್ನಡದಲ್ಲೇ ಇಂಜಿನಿಯರಿಂಗ್ ವಿದ್ಯಾಭ್ಯಾಸ ಆರಂಭ ಮಾಡಲಾಗುವುದು. ಭಾಲ್ಕಿಯ ಭೀಮಣ್ಣ ಖಂಡ್ರೆ ಕಾಲೇಜು, ವಿಜಯಪುರದ ಬಿಎಲ್‌ಡಿಇ ಕಾಲೇಜು, ಎಸ್‌ ಜೆಆರ್ ಚಿಕ್ಕಬಳ್ಳಾಪುರ ಹಾಗೂ ಮೈಸೂರಿನ‌ ಮಹಾರಾಜ ಕಾಲೇಜಿನಲ್ಲಿ ಈ ವರ್ಷದಿಂದ ಆರಂಭವಾಗುತ್ತದೆ. ಎಂದು ಸಚಿವ ಅಶ್ವಥ್ ನಾರಾಯಣ್ ತಿಳಿಸಿದರು.

ಕನ್ನಡದಲ್ಲೇ ಪಠ್ಯ ವಸ್ತು ಈಗಾಗಲೇ ಸಿದ್ಧವಾಗಿದೆ. ಮುಂದಿನ ದಿನಗಳಲ್ಲಿ ಕನ್ನಡದಲ್ಲೇ ಇಂಜಿನಿಯರಿಂಗ್ ವಿದ್ಯಾಭ್ಯಾಸ ಸಂಖ್ಯೆ‌ ಹೆಚ್ಚಾಗಲಿದೆ ಎಂದು ಸುದ್ದಿಗೋಷ್ಠಿ ನಡೆಸಿದೆ  ಎಂದರು.

Key words: Four colleges – state- start- engineering – Kannada-Minister- Ashwath Narayan.

 

….