ವಾಯುಭಾರ ಕುಸಿತ: ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ ಸಾಧ್ಯತೆ

Promotion

ಬೆಂಗಳೂರು, ಮೇ 08, 2022 (www.justkannada.in): ದಕ್ಷಿಣ ಅಂಡಮಾನ್ ಸಮುದ್ರದ ಮೇಲೆ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆಯಾಗಲಿದೆ.

ಕರ್ನಾಟಕ ಸೇರಿದಂತೆ ಪೂರ್ವ ಮತ್ತು ಈಶಾನ್ಯ ಭಾರತಕ್ಕೆ ಮತ್ತು ಕೇರಳ ಮತ್ತು ತಮಿಳುನಾಡಿನ ಹಲವಾರು ಭಾಗಗಳಿಗೆ ಹೇರಳವಾದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಬೆಂಗಳೂರು, ಬೆಂ. ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಮಂಡ್ಯ, ಮೈಸೂರು, ಚಿತ್ರದುರ್ಗ, ಬಳ್ಳಾರಿ ಹಾಗೂ ದಾವಣಗೆರೆಯಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ ಬೀಳಲಿದೆ.