ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ನಾಲ್ವರು ವಿದ್ಯಾರ್ಥಿಗಳು ಅಮಾನತು.

Promotion

ಮಂಗಳೂರು ಡಿಸೆಂಬರ್‌ 9,2022(www.justkannada.in):  ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ಆರೋಪದ ಮೇಲೆ ನಾಲ್ವರು ಮುಸ್ಲಿಂ ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ವಾಮಂಜೂರಿನ ಖಾಸಗಿ ಕಾಲೇಜಿನಲ್ಲಿ ನಾಲ್ವರು ವಿದ್ಯಾರ್ಥಿಗಳನ್ನ ಅಮಾನತು ಮಾಡಲಾಗಿದೆ. ನಾಲ್ವರು ವಿದ್ಯಾರ್ಥಿಗಳು ಬುರ್ಖಾ ಧರಿಸಿ ವೇದಿಕೆಯಲ್ಲಿ ನೃತ್ಯ ಮಾಡಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ಇದಕ್ಕೆ ಭಾರಿ ಆಕ್ಷೇಪ ವ್ಯಕ್ತವಾಗಿತ್ತು.

ಈ ಬೆನ್ನಲ್ಲೆ ಕಾಲೇಜು ಆಡಳಿತ ಮಂಡಳಿ ಡ್ಯಾನ್ಸ್ ಮಾಡಿದ ನಾಲ್ವರನ್ನ ಅಮಾನತು ಮಾಡಿದೆ.

Key words: Four students – danced -wearing -burqas – suspended-mangalore