‘ಜ್ಞಾನಬುತ್ತಿ’ ಯಿಂದ ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗೆ ಉಚಿತ ತರಬೇತಿ.

ಮೈಸೂರು,ಫೆಬ್ರವರಿ,9,2023(www.justkannada.in):  ಜ್ಞಾನಬುತ್ತಿ ಸಂಸ್ಥೆ ವತಿಯಿಂದ ಕರ್ನಾಟಕ ಸರ್ಕಾರ ನಡೆಸಲಿರುವ ರಾಜ್ಯ ಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ((KSET) ಹಾಗೂ ದೆಹಲಿಯ ವಿಶ್ವ ವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಾಲೇಜು ಸಹಾಯಕ ಪ್ರಾಧ್ಯಾಪಕರ ಮತ್ತು ಕಿರಿಯ ಶಿಷ್ಯವೇತನ ಸಂಶೋಧನಾ ಸಹಾಯಕರ ಅರ್ಹತಾ (UGC-NET) ಪರೀಕ್ಷೆಗೆ ಉಚಿತ ತರಬೇತಿಯನ್ನು ನೀಡಲು ನಿರ್ಧರಿಸಲಾಗಿದೆ.

ಆಸಕ್ತರು ದಿನಾಂಕ: 13.02.2023 ರೊಳಗಾಗಿ ಪ್ರತಿದಿನ ಸಂಜೆ 5:30ರಿಂದ 7:30ರವರೆಗೆ ಮೈಸೂರಿನ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನಲ್ಲಿರುವ ಜ್ಞಾನಬುತ್ತಿ ಸಂಸ್ಥೆಯಲ್ಲಿ ಸಂಯೋಜಕರಾದ ಕೆ.ವೈ. ನಾಗೇಂದ್ರ (8296788251) ಸಿ.ಕೆ. ಕಿರಣ್‍ ಕೌಶಿಕ್ (9972830857) ಅವರಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು ಎಂದು ಸಂಸ್ಥೆಯ ಕಾರ್ಯದರ್ಶಿ ಹೆಚ್. ಬಾಲಕೃಷ್ಣ (9448117455) ಅವರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

key words: Free Coaching – K-SET – UGC-NET -Exam -Jnanabutti-mysore