ಫ್ರೀ ಕಾಶ್ಮೀರ ನಾಮಫಲಕ ಪ್ರದರ್ಶನ ಪ್ರಕರಣ: ನಳಿನಿ ಮತ್ತು ಮರಿದೇವಯ್ಯ ಪರ ಜಾಮೀನು ಅರ್ಜಿ ಸಲ್ಲಿಕೆ: ವಿಚಾರಣೆ ಮಧ್ಯಾಹ್ನಕ್ಕೆ ಮುಂದೂಡಿಕೆ…..

ಮೈಸೂರು,ಜ,20,2020(www.justkannada.in):  ಫ್ರೀ ಕಾಶ್ಮೀರ ನಾಮಫಲಕ ಪ್ರದರ್ಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಳಿನಿ ಮತ್ತು ಮರಿದೇವಯ್ಯ ಪರ ಜಾಮೀನು ಅರ್ಜಿ ಸಲ್ಲಿಕೆಯಾಗಿದ್ದು  2 ನೇ ಹೆಚ್ಚುವರಿ ಜಿಲ್ಲಾ ಮತ್ತ ಸತ್ರ ನ್ಯಾಯಾಲಯ  ವಿಚಾರಣೆಯನ್ನ ಮಧ್ಯಾಹ್ನಕ್ಕೆ ಮುಂದೂಡಿದೆ.

ನಳಿನಿ ಮತ್ತು ಮರಿದೇವಯ್ಯ ಪರ ದ್ವಾರಕನಾಥ್ ಅಂಡ್ ಟೀ ನಿಂದ ವಕಾಲತ್ತು ವಹಿಸಿದ್ದು  129 ವಕೀಲರ ಸಹಿ ಇರುವ ವಕಾಲತ್ತು ಅರ್ಜಿಯನ್ನ ಕೋರ್ಟ್ ಗೆ ಸಲ್ಲಿಕೆ ಮಾಡಿದ್ದಾರೆ. ವಕಾಲತ್ತು ಸ್ವೀಕರಿಸಿದ 2ನೇ ಹೆಚ್ಚುವರಿ ಜಿಲ್ಲಾ ಮತ್ತ ಸತ್ರ ನ್ಯಾಯಾಲಯ  ವಿಚಾರಣೆಯನ್ನ ಮಧ್ಯಾಹ್ನ 3 ಗಂಟೆಗೆ ಮುಂದೂಡಿಕೆ ಮಾಡಿದೆ.

ಈ ಬಗ್ಗೆ ಮಾತನಾಡಿರುವ ನಳಿನಿ ಪರ ವಕೀಲ ಜಗದೀಶ್,  ಯಾವುದೇ ಪ್ರಕರಣವಾದರೂ ಪರಿಶೀಲನೆ ಮಾಡಿ ತೀರ್ಮಾನ ತೆಗೆದುಕೊಳ್ಳಬೇಕು. ನೋಡಿದ್ದು ಸುಳ್ಳಾಗಬಹುದು, ಕೇಳಿದ್ದು ಸುಳ್ಳಾಗಬಹುದು. ಪ್ರಕರಣವನ್ನ ಪರಿಶೀಲನೆ ಮಾಡಿದ ನಂತ್ರ ಸತ್ಯ ತಿಳಿಯಲಿದೆ. ಈ ಪ್ರಕರಣ ಸಂಬಂಧ ವಕಾಲತ್ತು ವಹಿಸದಿದ್ರೆ, ಪ್ರಕರಣ ಇಲ್ಲಿಗೆ ನಿಲ್ಲುತ್ತದೆ. ಪ್ರಕರಣ ನ್ಯಾಯಾಲಯದಲ್ಲಿ ತೀರ್ಮಾನವಾಗಲಿ. ನಂತರ ಸತ್ಯಾಸತ್ಯತೆ ತಿಳಿಯಲಿದೆ. ತಪ್ಪಿತಸ್ಥರಾದರೆ ಅವರಿಗೆ ಶಿಕ್ಷೆಯಾಗಲಿ. ತಪ್ಪಿತಸ್ಥರಲ್ಲದಿದ್ದರೆ ಅವರಿಗೆ ನ್ಯಾಯಸಿಗಲಿ. ಈ ವಿಚಾರದಲ್ಲಿ ಮೈಸೂರು ವಕೀಲರ ಸಂಘದ ನಿರ್ಧಾರ ಅವರಿಗೆ ಬಿಟ್ಟದ್ದು. ಮೈಸೂರು ವಕೀಲರು ಮತ್ತು ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಮ್ಮ ಕರ್ತವ್ಯ ನಾವು ನಿರ್ವಹಿಸುತ್ತಿದ್ದೇವೆ ಎಂದು ಜಗದೀಶ್ ತಿಳಿಸಿದ್ದಾರೆ.

ಫ್ರೀ ಕಾಶ್ಮೀರ ಫಲಕ ಪ್ರದರ್ಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಂದೆಡೆ ಮೈಸೂರು ಜಿಲ್ಲಾ ವಕೀಲರ ಸರ್ವ ಸದಸ್ಯರ ಸಭೆ ಮುಕ್ತಾಯವಾಗಿದ್ದು  ಸಂಘದ ನಿರ್ಣಯಕ್ಕೆ ಬದ್ದರಾಗಿರಲು ವಕೀಲರು ನಿರ್ಧಾರ ಮಾಡಿದ್ದಾರೆ. ಸರ್ವ ಸದಸ್ಯರಿಂದ ಒಮ್ಮತದ ನಿರ್ಧಾರವಾಗಿದೆ.

ಎಲ್ಲಾ ಹಿತಗಳಿಗಿಂತ ದೇಶದ ಭದ್ರತೆ ಹಿತಾಸಕ್ತಿ ಮುಖ್ಯ. ದೇಶದ್ರೋಹದ ಆರೋಪದ ಪರ ವಕಾಲತ್ತು ವಹಿಸುವುದು ಸಂಘದ ಗೌರವಕ್ಕೆ ತರವಲ್ಲ. ಸಂಘದ ಗೌರವ ಘನತೆಯ ದೃಷ್ಠಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಹೊರಗಿನಿಂದ ಬಂದ ವಕೀಲರಿಗೂ ಈ ಬಗ್ಗೆ ಮನವಿ ಮಾಡಲು ಮೈಸೂರು ಜಿಲ್ಲಾ ವಕೀಲರ ಸರ್ವ ಸದಸ್ಯರ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Key words: Free Kashmir-playcard – bail application – Nalini –Maridevaya- mysore court