ಮೈಸೂರು ವಿವಿ ಕ್ಯಾಂಪಸ್ ನಲ್ಲಿ ಫ್ರೀ ಕಾಶ್ಮೀರ ಎಂಬ ಪೋಸ್ಟರ್ ಪ್ರದರ್ಶನ ವಿಚಾರ : ಪೊಲೀಸರಿಂದ ಸ್ವಯಂ ಪ್ರೇರಿತ ದೂರು ದಾಖಲು…

ಮೈಸೂರು,ಜ,9,2020(www.justkannada.in):  ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕ್ಯಾಂಪಸ್ ನಲ್ಲಿ ಫ್ರೀ ಕಾಶ್ಮೀರ ಎಂಬ ಪೋಸ್ಟರ್ ಪ್ರದರ್ಶನ ವಿಚಾರಕ್ಕೆ ಸಂಬಂಧಿಸಿದಂತೆ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿದೆ.

ಈ ಸಂಬಂಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲು ನಗರ ಪೊಲೀಸ್ ಆಯುಕ್ತರು  ಸೂಚನೆ ನೀಡಿದ್ದರು. ಪ್ರತಿಭಟನೆ ಆಯೋಜಕರ ವಿರುದ್ಧ ದೂರು ದಾಖಲಿಸುವಂತೆ  ಸೂಚನೆ ನೀಡಿದ ಹಿನ್ನೆಲೆ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಜೆ ಎನ್ ಯು ವಿವಿಯಲ್ಲಿನ ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ನಿನ್ನೆ  ಮೈಸೂರು ವಿಶ್ವ ವಿದ್ಯಾನಿಲಯದ ಕ್ಯಾಂಪಸ್ ನಲ್ಲಿ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆಯಲ್ಲಿ ಫ್ರಿ ಕಾಶ್ಮೀರ ಎಂಬ ಪೋಸ್ಟರ್ ಕಾಣಿಸಿಕೊಂಡಿತ್ತು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಇದೀಗ ಸ್ವಯಂ ದೂರು ದಾಖಲಿಸಿಕೊಂಡು ತನಿಖೆ ಮುಂದಾಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮೈಸೂರು ನಗರ ಪೊಲೀಸ್ ಆಯುಕ್ತ ಕೆಟಿ ಬಾಲಕೃಷ್ಣ, ನೆನ್ನೆ 7 ಗಂಟೆಯ ಸಮಯದಲ್ಲಿ ಈ ಘಟನೆ ನಡೆದಿದೆ. ಜಯಲಕ್ಷ್ಮಿ ಪುರಂ ಪೊಲೀಸರು ಹಾಗೂ ಗುಪ್ತಚರ ಇಲಾಖೆಯ ಸಿಬ್ಬಂದಿಗಳು ಪೋಟೋ ಮತ್ತು ವಿಡಿಯೋ ಚಿತ್ರಿಕರಣ ಮಾಡಿದ್ದಾರೆ. ಪ್ರತಿಭಟನಾ ಆಯೋಜಕರ ಮೇಲೆ ದೂರು ದಾಖಲಿಸಲಾಗಿದೆ. ಈ ಸಂಬಂಧ ಸಮಗ್ರ ತನಿಖೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ವಿವಿ ಆವರಣದಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಅವಶ್ಯಕತೆ ಇಲ್ಲ.. ಈ ವಿಚಾರವಾಗಿ ಬಿತ್ತಿ ಪತ್ರ ಹಿಡಿದವರು ಯಾರು.? ಮತ್ತು ಇಲ್ಲಿನ ವಿದ್ಯಾರ್ಥಿಗಳ.?  ಅಥವಾ ಹೊರಗಿನಿಂದ ಬಂದವರಾ.? ಎಂಬುದು ತನಿಖೆಯಿಂದ ತಿಳಿಯಲಿದೆ ಎಂದು ನಗರ ಪೋಲೀಸ್ ಆಯುಕ್ತ ಕೆಟಿ ಬಾಲಕೃಷ್ಣ ಹೇಳಿದ್ದಾರೆ.

Key words: Free Kashmir- Poster -Exhibition – Mysore university- Campus-FIR-Police