ವಲಸೆ ಕಾರ್ಮಿಕರ ಸಂಚಾರಕ್ಕೆ ಉಚಿತ ವ್ಯವಸ್ಥೆ ಮಾಡಿ-ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ…

Promotion

ನವದೆಹಲಿ,ಮಾ,28,2020(www.justkannada.in):  ಕೊರೋನಾ ಮಹಾಮಾರಿಯಿಂದ ಲೌಕ್ ಡೌನ್ ಹಿನ್ನೆಲೆ ಸಂಕಷ್ಟಕ್ಕೆ ಸಿಲುಕಿರುವ ವಲಸೆ ಕಾರ್ಮಿಕರ ಸಂಚಾರಕ್ಕೆ ಉಚಿತ ವ್ಯವಸ್ಥೆ ಮಾಡಿ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ವಲಸೆ ಕಾರ್ಮಿಕರ ಹೊಣೆ ರಾಜ್ಯ ಸರ್ಕಾರಗಳದ್ದು. ವಲಸೆ ಕಾರ್ಮಿಕರು ಸಂಚರಿಸಲು ಉಚಿತ ವ್ಯವಸ್ಥೆ ಮಾಡಿ. ಪ್ರಯಾಣದ ವೇಳೆ ಉಚಿತ ಊಟ ಮತ್ತು ನೀರಿನ ವ್ಯವಸ್ಥೆ ಮಾಡಬೇಕು. ಹಾಗೆಯೇ ರೈಲು ಅಥವಾ ಬಸ್ ಸಂಚಾರದ ಶುಲ್ಕವನ್ನ ವಿಧಿಸುವಂತಿಲ್ಲ. ಕೇಂದ್ರ ಸರ್ಕಾರದ ಜತೆಗೆ ರಾಜ್ಯ ಸರ್ಕಾರಗಳೂ ರೈಲಿನ ಶುಲ್ಕ ಪಾವತಿಸಲಿ ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

Key words: free –travel- migrant worker -Supreme Court – state and central government.