ಇಂದು ರಾತ್ರಿಯಿಂದ ಒಂದು ವಾರಗಳ ಕಾಲ ದೆಹಲಿಯಲ್ಲಿ  ಸಂಪೂರ್ಣ ಕರ್ಫ್ಯೂ ಜಾರಿ…

Promotion

ನವದೆಹಲಿ,ಏಪ್ರಿಲ್,19,2021(www.justkannada.in):  ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ  ಕೊರೊನಾ ವೈರಸ್  ಹೆಚ್ಚುತ್ತಿರುವ ಹಿನ್ನೆಲೆ  ಕೊರೋನಾ ನಿಯಂತ್ರಣಕ್ಕಾಗಿ ನಿಯಂತ್ರಿಸಲು ಇಂದು ರಾತ್ರಿಯಿಂದ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿ ಮಾಡಲಾಗಿದೆ.jk

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ದೆಹಲಿಯಲ್ಲಿ ಕೊರೋನಾ ಪರಿಸ್ಥಿತಿ ಗಂಭೀರವಾಗಿದೆ. ಹೀಗಾಗಿ ಇಂದು ರಾತ್ರಿ 10 ಗಂಟೆಯಿಂದ ಮುಂದಿನ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಕಂಪ್ಲೀಟ್ ಕರ್ಫ್ಯೂ ಇರಲಿದೆ ಎಂದು ತಿಳಿಸಿದ್ದಾರೆ.full curfew - Delhi -week -from –tonight-CM arvind kejriwal

 ದೆಹಲಿಯಲ್ಲಿ ಭಾರಿ ಪ್ರಮಾಣದಲ್ಲಿ ಕೋವಿಡ್ ಸೋಂಕು ಹರಡುತ್ತಿದೆ. ಲಾಕ್ ಡೌನ್ ನಿಂದ ಕೋವಿಡ್ ತಡೆಯಲು ಸಾಧ್ಯವಿಲ್ಲ, ಆದರೆ ಸಣ್ಣ ಅವಧಿಯ ಲಾಕ್ ಡೌನ್ ನಿಂದ ಸೋಂಕು ಹರಡುವುದನ್ನು ತಡೆಗಟ್ಟಬಹುದಾಗಿದೆ.  ಕೋವಿಡ್-19 ರೋಗಿಗಳಿಗೆ ಆಮ್ಲಜನಕ ಮತ್ತು ಹಾಸಿಗೆಗಳ ತೀವ್ರ ಕೊರತೆ’ ಉಂಟಾಗಿದೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.

Key words: full curfew – Delhi -week -from –tonight-CM arvind kejriwal