ಮೈಸೂರು ಜಿಲ್ಲೆಯಲ್ಲಿ ವಾರದಲ್ಲಿ ಐದು ದಿನ  ಸಂಪೂರ್ಣ ಲಾಕ್ ಡೌನ್ – ಡಿಸಿ ರೋಹಿಣಿ ಸಿಂಧೂರಿ ಆದೇಶ.

kannada t-shirts

ಮೈಸೂರು,ಮೇ,27,2021(www.justkannada.in):  ಮೈಸೂರು ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ಹೆಚ್ಚುತ್ತಿದ್ದು ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ವಾರದಲ್ಲಿ ಐದು ದಿನ ಸಂಪೂರ್ಣ ಲಾಕ್ ಡೌನ್ ಮಾಡಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.

ಮೇ 29ರಿಂದ ಜೂನ್ 7ರವರೆಗೆ ವಾರದ ಐದು ದಿನಗಳು ಸಂಪೂರ್ಣ ಲಾಕ್ ಡೌನ್ ಇರಲಿದ್ದು ಪ್ರತಿ ಸೋಮವಾರ, ಗುರುವಾರ  ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿರುತ್ತದೆ.

ಈ ಬಗ್ಗೆ ಆದೇಶ ಹೊರಡಿಸಿರುವ ಮೈಸೂರು ಡಿಸಿ ರೋಹಿಣಿ ಸಿಂಧೂರಿ, 29-05-2021 ರಿಂದ ಜಾರಿಗೆ ಬರುವಂತೆ ದಿನಾಂಕ:07-06-2021 ರ ಬೆಳಿಗ್ಗೆ 6.00 ಗಂಟೆಯವರೆಗೆ ಎರಡು ದಿನಗಳು ಅಂದರೆ ಪ್ರತಿ ಸೋಮವಾರ ಮತ್ತು ಗುರುವಾರಗಳಂದು ಸರ್ಕಾರದ ಉಲ್ಲೇಖ(2) ಮತ್ತು (3) ರ ಮಾರ್ಗಸೂಚಿಯಲ್ಲಿ ವಿವರಿಸಿರುವ ಚಟುವಟಿಕೆಗಳಿಗೆ ಬೆಳಿಗ್ಗೆ 6-00 ಗಂಟೆಯಿಂದ ಮಧ್ಯಾಹ್ನ 12-00 ಗಂಟೆಯವರೆಗೆ ಮಾತ್ರ ಅನುಮತಿ ನೀಡಿ ಬ್ಯಾಂಕ್‌ ಹಾಗೂ ಭಾರತೀಯ ವಿಮಾ ಯೋಜನೆಯ ವ್ಯವಹಾರಗಳನ್ನು ಸದರಿ ದಿನಗಳಂದು ಮಾತ್ರ ಬೆಳಿಗ್ಗೆ 8-00 ಗಂಟೆಯಿಂದ ಮಧ್ಯಾಹ್ನ 12-00 ಗಂಟೆಯವರೆಗೆ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಿದೆ.

ಸ್ಟಾಂಡ್ ಆಲೋನ್ ಹಾಲಿನ ಬೂತ್‌ಗಳು, ವೈದ್ಯಕೀಯ ಸೇವೆಗಳು, ಹಾಪ್ ಕಾಮ್ಸ್ ಅಡಿಯಲ್ಲಿ ಬರುವ ತರಕಾರಿ ಮತ್ತು ಹಣ್ಣಿನ ಅಂಗಡಿಗಳು ಹಾಗೂ ನ್ಯಾಯ ಬೆಲೆ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ರೀತಿಯ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಆದೇಶಿಸಿದೆ.

ನಿಷೇದಾಜ್ಞೆ ಅವಧಿಯಲ್ಲಿ ಸರಕು ಸಗಟು ವಾಹನಗಳನ್ನು ಹೊರತುಪಡಿಸಿ ಯಾವುದೇ ವಾಹನ ಸಂಚಾರ ಹಾಗೂ ವ್ಯಕ್ತಿಗಳ ಓಡಾಟ ಕಂಡುಬಂದಲ್ಲಿ ವಿವತ್ತು ನಿರ್ವಹಣಾ ಕಾಯ್ದೆ-2005 ರ ಉಪಬಂಧಗಳು ಹಾಗೂ ಭಾರತೀಯ ದಂಡ ಸಂಹಿತೆಯ ಅನುಚ್ಛೇದ 188ರ ಅಡಿಯಲ್ಲಿ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾಗ ಇತರ ಕಾನೂನು ಉಪಬಂಧಗಳ ಮೇರೆಗೆ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.Mysuru DC instructs officials concerned to focus more on patients with comorbidities

ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಎದ್ದು ಕಾಣುವಂತ ಹಾಗೂ ಧ್ವನಿ ವರ್ಧಕಗಳ ಮೂಲಕ ಪ್ರಚಾರ ಮಾಡಲು ಹಾಗೂ ಈ ಆದೇಶವನ್ನು ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಆದೇಶಿಸಿದೆ ಎಂದು ಆದೇಶದಲ್ಲಿ ಡಿಸಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.

Key words: Full lockdown -five days- a week – Mysore district-DC Rohini Sindhuri-orders.

website developers in mysore