ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪಂಚಭೂತಗಳಲ್ಲಿ ಲೀನ…

Promotion

ನವದೆಹಲಿ,ಆ,7,2019(www.justkannada.in) ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿಗೌರವದೊಂದಿಗೆ ನವದೆಹಲಿಯ ಲೂಧಿ ರಸ್ತೆಯಲ್ಲಿರುವ ವಿದ್ಯುತ್ ಚಿತಾಗಾರದಲ್ಲಿ ನಡೆಯಿತು.

ನವದೆಹಲಿಯ ಲೂಧಿ ರಸ್ತೆಯಲ್ಲಿರುವ  ದಯಾನಂದ್ ಘಾಟ್ ನ ಮುಕ್ತಿದಾಮದ ವಿದ್ಯುತ್ ಚಿತಗಾರದಲ್ಲಿ ಮಾಜಿ ಕೇಂದ್ರ ಸಚಿವ  ಸುಷ್ಮಾಸ್ವರಾಜ್ ಅವರ ಅಂತ್ಯಕ್ರಿಯೆ ನೆರವೇರಿತು.  ಅಂತ್ಯಕ್ರಿಯೆಗು ಮುನ್ನ ಗಣ್ಯಾತಿಗಣ್ಯರು ಅಂತಿಮ ದರ್ಶನ ಪಡೆದರು. ಬಳಿಕ ಸಕಲ ಸರ್ಕಾರಿ ಗೌರವ ಸಲ್ಲಿಸಲಾಯಿತು.

ಅಂತ್ಯಕ್ರಿಯೆ ವೇಳೆ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ,  ಕೇಂದ್ರ ಸಚಿವ ರಾಜನಾಥ್ ಸಿಂಗ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.  ನಿನ್ನೆ ರಾತ್ರಿ ಸುಷ್ಮಾಸ್ವರಾಜ್ ಅವರ ಆರೋಗ್ಯದಲ್ಲಿ ದಿಢೀರ್‌ ಏರುಪೇರು ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ‌ಆದರೆ ಅವರು ಹೃದಯಾಘಾತದಿಂದ ನಿಧನರಾದರು.

key words:  funeral – former Foreign Minister -Sushma Swaraj- New Delhi