ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಹೊರತುಪಡಿಸಿ ಮತ್ತಷ್ಟು ಬಿಗಿ ಕ್ರಮ- ಸಚಿವ ಸುಧಾಕರ್…

Promotion

ಬೆಂಗಳೂರು,ಏಪ್ರಿಲ್,14,2021(www.justkannada.in):  ರಾಜ್ಯದಲ್ಲಿ ಕೊರೋನಾ 2ನೇ ಅಲೆ ಹೆಚ್ಚಾಗುತ್ತಿದ್ದು ಈ ಮಧ್ಯೆ ಲಾಕ್ ಡೌನ್ ಬಗ್ಗೆ ಚರ್ಚೆಯಾಗುತ್ತಿದೆ. ಆದರೆ ಇದಕ್ಕೆ ಈಗಾಗಲೇ ಸಿಎಂ ಬಿಎಸ್ ವೈ ಸ್ಪಷ್ಟನೆ ನೀಡಿದ್ದು ಯಾವುದೇ ಲಾಕ್ ಡೌನ್ ಪ್ರಸ್ತಾಪವಿಲ್ಲ ಎಂದಿದ್ದಾರೆ.CM,B.S.Y,Statement,atrocious,Extreme,Kodihalli Chandrasekhar

ಇನ್ನು ಕೊರೋನಾ ನಿಯಂತ್ರಣ ಲಾಕ್ ಡೌನ್ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಹೊರತುಪಡಿಸಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. Further- tightening –action-corona control-Minister- Sudhakar.

ಸಿಎಂ ಬಿಎಸ್ ವೈ ಪ್ರವಾಸದಿಂದ ಬಂದ ಬಳಿಕ ಸರ್ವಪಕ್ಷ ಸಭೆ ನಡೆಸಲಿದ್ದಾರೆ. ಇಲ್ಲಿ ಎಲ್ಲರ ಸಲಹೆ ಸೂಚನೆ ಪಡೆಯಲಿದ್ದಾರೆ. ರಾಜ್ಯದಲ್ಲಿ ಸೋಂಕು, ಸಾವಿನ ಪ್ರಮಾಣವೂ ಹೆಚ್ಚಾಗುತ್ತಿದೆ. ಸಾವಿನ ಪ್ರಮಾಣ ಕಳೆದ ವರ್ಷದಷ್ಟೇ ಆಗುತ್ತಿದೆ. ಈ ನಿಟ್ಟಿನಲ್ಲಿ ಲಾಕ್ ಡೌನ್ ಹೊರತುಪಡಿಸಿ ಬಿಗಿಯಾದ ಕ್ರಮ ತೆಗೆದುಕೊಳ್ಳಬೇಕಾಗಿದೆ ಎಂದು ಹೇಳಿದ್ದಾರೆ.

Key words: Further- tightening –action-corona control-Minister- Sudhakar.