ಆಸ್ಪತ್ರೆ ಕಟ್ಟಡದಿಂದ ಹಾರಿ ಕೊರೋನಾ ಸೋಂಕಿತ ಆತ್ಮಹತ್ಯೆ….

Promotion

ಗದಗ,ಸೆಪ್ಟಂಬರ್,4,2020(www.justkannada.in):  ಆಸ್ಪತ್ರೆ ಕಟ್ಟಡದಿಂದ ಹಾರಿ ಕೊರೋನಾ ಸೋಂಕಿತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.jk-logo-justkannada-logo

ಗದಗ ಹೊರ ವಲಯದಲ್ಲಿರುವ ಜಿಮ್ಸ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಮುಂಡರಗಿ ತಾಲ್ಲೂಕಿನ ಡೋಣಿ ಗ್ರಾಮದ ವ್ಯಕ್ತಿ ಆತ್ಮಹತ್ಯೆಗೆ ಶರಣಾದವರು. ಮೃತ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿತ್ತು. ಈ ಹಿನ್ನೆಲೆ ವ್ಯಕ್ತಿಯನ್ನ ಗದಗದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.gadag-corona-infected-person-suicide-hospital-building

ಆದರೆ ವ್ಯಕ್ತಿ ಆಸ್ಪತ್ರೆಯ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಸೋಂಕಿತ ವ್ಯಕ್ತಿ ಒಮ್ಮೆ ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದೆ.

Key words: gadag-Corona- infected-person- suicide – hospital- building