ಮೈಸೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳ ಬಂಧನಕ್ಕೆ ಸ್ವಲ್ಪ ಸಮಯ ಬೇಕಿದೆ ಎಂದ್ರು ಗೃಹ ಸಚಿವ ಅರಗ ಜ್ಞಾನೇಂದ್ರ.

Promotion

ಮೈಸೂರು,ಆಗಸ್ಟ್,27,2021(www.justkannada.in):  ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.  ಆರೋಪಿಗಳ ಪತ್ತೆಗೆ ಸ್ವಲ್ಪ ಸಮಯ ಬೇಕಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು ಘಟನೆ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ. ಆರೋಪಿಗಳ ಪತ್ತೆಗೆ ಸ್ವಲ್ಪ ಸಮಯ ಬೇಕಿದೆ. ತನಿಖೆ ಹಂತದಲ್ಲಿರುವುದರಿಂದ ಹೆಚ್ಚಿನ ಮಾಹಿತಿ ಹೇಳಲಾಗಲ್ಲ. ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆ ಹಚ್ಚಲಾಗುವುದು ಎಂದು ಹೇಳಿದರು.

ಪೊಲೀಸರ ತನಿಖೆ ಚುರುಕಾಗಿದೆ. ಸಂತ್ರಸ್ತೆ ಪೊಲೀಸರಿಗೆ ತಮ್ಮ ಹೇಳಿಕೆ ನೀಡಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

Key words: Gang rape -case – Mysore-Home minister- Araga Jnanendra