ಮೈಸೂರಿನಲ್ಲಿ ಯುವತಿಯ ಮೇಲಿನ ಗ್ಯಾಂಗ್ ರೇಪ್ ಖಂಡಿಸಿ ಪ್ರತಿಭಟನೆ: ಗೃಹ ಸಚಿವರ ರಾಜೀನಾಮೆಗೆ ಆಗ್ರಹ.

Promotion

ಮೈಸೂರು,ಆಗಸ್ಟ್,25,2021(www.justkannada.in): ಮೈಸೂರಿನಲ್ಲಿ ಯುವತಿಯ ಮೇಲೆ ನಡೆದಿರುವ ಗ್ಯಾಂಗ್ ರೇಪ್  ಖಂಡಿಸಿ ಇಂದು ಮೈಸೂರು ಜಿಲ್ಲಾ ವಿದ್ಯಾರ್ಥಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಮೈಸೂರಿನ ಗಾಂಧಿ ಪ್ರತಿಮೆಯ ಬಳಿ ಜಮಾಯಿಸಿದ ಜಿಲ್ಲಾ ವಿದ್ಯಾರ್ಥಿ ಕಾಂಗ್ರೆಸ್ ಕಾರ್ಯಕರ್ತರು ಗ್ಯಾಂಗ್ ರೇಪ್ ಪ್ರಕರಣ ಖಂಡಿಸಿ, ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಸರ್ಕಾರ ಇರುವ ಕಡೆಗಳಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದೆ. ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ನೆಲ ಕಚ್ಚಿದೆ. ಗೃಹ ಸಚಿವರು ಕಾನೂನು ಸುವ್ಯವಸ್ಥೆ ಕಾಪಾಡಲು ಸಂಪೂರ್ಣ ವಿಫಲರಾಗಿದ್ದಾರೆ.ಈ ವಿಚಾರದಲ್ಲಿ ಗೃಹ ಸಚಿವರು ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Key words: Gang-rape mysore-protests- Demanding -resignation -Home Minister